ಮಹಾಲಿಂಗಪುರ: ಸಮೀಪದ ಕೆಸರಗೊಪ್ಪ ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆದ ಕೆಸರಗೊಪ್ಪ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಹಾಲಿಂಗಪುರದ ಯುಕೆ ವಾರಿಯರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ಕೆಸರಗೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತರುಣ ಕ್ಷೇಮಾಭಿವೃದ್ಧಿ ಸಂಘ ಹಾಗೂ ನೇತಾಜಿ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತ ಅಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಿದ್ದವು. ಚಿಮ್ಮಡದ ವೀರ ಮದಕರಿ ತಂಡ ದ್ವಿತೀಯ, ರನ್ನಬೆಳಗಲಿಯ ಬೆಳಗಲಿ ಬ್ರದರ್ಸ್ ತಂಡ ತೃತೀಯ ಸ್ಥಾನ ಪಡೆದವು.

ಬಹುಮಾನ ವಿತರಿಸಿ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕ ಡಿ.ಎಂ. ಬ್ಯಾಕೋಡ, ‘ನಮ್ಮ ಗ್ರಾಮದ ಯುವಕರು ಮೊದಲ ಬಾರಿಗೆ ಐಪಿಎಲ್ ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಗ್ರಾಮೀಣ ಭಾಗದ ಆಟಗಾರರಿಗೆ ಪ್ರೋತ್ಸಾಹ ನೀಡಿದ್ದು ಸ್ವಾಗತಾರ್ಹ’ ಎಂದರು.

ಭೀಮಸಿ ಬ್ಯಾಕೋಡ, ಸಿದ್ದು ಸತ್ತಿಗೇರಿ, ಪ್ರಭು ಹುಬ್ಬಳ್ಳಿ, ಮಂಜು ಸುತಾರ, ಶಿವಯ್ಯ ಮಠಪತಿ, ಮಹಾಲಿಂಗ ಮಾದರ, ರಾಮಚಂದ್ರ ಮೇತ್ರಿ, ಪರಶುರಾಮ ಮಾದರ, ಬಸವರಾಜ ಮರನೂರ, ನಾರಾಯಣ ನಿಕ್ಕಂ, ಬಸವರಾಜ ಢವಳೇಶ್ವರ, ಪ್ರಶಾಂತ ನ್ಯಾಮಗೌಡ, ಸಚಿನ ಸತ್ತಿಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-19-277861056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.