ನುಗ್ಗೇಹಳ್ಳಿ: ‘ಹೋಬಳಿ ಕೇಂದ್ರ ವಾಲಿಬಾಲ್ ಆಟಕ್ಕೆ ಹೆಚ್ಚು ಪ್ರಸಿದ್ಧಿ ಹೊಂದಿದ್ದು, ಬೇರೆ ಕ್ರೀಡೆಗಳಿಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರಿಕೆಟ್ ಟೂರ್ನಿ ಆಯೋಜಿಸಿರುವುದು ಈ ಭಾಗದ ಜನರ ಕ್ರೀಡಾ ಮನೋಭಾವ ತೋರುತ್ತದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ಹೋಬಳಿ ಕೇಂದ್ರದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಟೂರ್ನಿಗೆ ಶುಭ ಕೋರಿ ಮಾತನಾಡಿದರು.

‘ಹೋಬಳಿ ಕೇಂದ್ರದಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ, ಈ ಭಾಗದ ಯುವಕರಲ್ಲಿ ಕ್ರೀಡಾ ಆಸಕ್ತಿ ಹೆಚ್ಚುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಾಗಲು ಕಾರಣವಾಗಿದೆ. ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ತರಬೇತಿ ಅವಶ್ಯಕತೆ ಇದೆ’ ಎಂದರು.

‘ಕರ್ನಾಟಕದ ಕೆಲ ಯುವ ಆಟಗಾರರು ಐಪಿಎಲ್ ಸೇರಿದಂತೆ ರಾಷ್ಟ್ರೀಯ ತಂಡದಲ್ಲಿ ಹೆಚ್ಚು ಹೆಸರು ಮಾಡುತ್ತಿದ್ದಾರೆ. ಕ್ರೀಡಾಪಟುಗಳಿಗೆ ಕುಟುಂಬದ ಪ್ರೋತ್ಸಾಹ ಮುಖ್ಯವಾಗಿದೆ, ಆಗ ಮಾತ್ರ ಅವರು ಕ್ರೀಡೆಯಲ್ಲಿ ಯಶಸ್ಸು ಕಾಣಲು ಸಾಧ್ಯ. ತಾಲ್ಲೂಕಿನಲ್ಲಿ ಕ್ರೀಡೆ, ಶಿಕ್ಷಣ, ಸಹಕಾರ ಕ್ಷೇತ್ರ, ನೀರಾವರಿ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ’ ಎಂದು ಹೇಳಿದರು.

ಉದ್ಯಮಿ ಭುವನಹಳ್ಳಿ ಯೋಗೇಶ್ ಮಾತನಾಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಟಿಎಪಿಎಂಎಸ್ ನಿರ್ದೇಶಕ ತೋಟಿ ನಾಗರಾಜ್, ತಾ.ಪಂ ಮಾಜಿ ಸದಸ್ಯ ಪುಟ್ಟಸ್ವಾಮಿ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಮುಖಂಡರಾದ ಮೊಹಮ್ಮದ್ ಜಾವೀದ್, ಶಿವಣ್ಣ, ಎಚ್.ಬಿ. ರಂಗಸ್ವಾಮಿ, ಮುರಳಿ, ಎನ್.ಎಸ್. ಮಂಜುನಾಥ್, ಹೊನ್ನೇಗೌಡ, ನಟರಾಜು, ಶಿವಕುಮಾರ್, ಚಂದ್ರು, ಎಂ.ಎಸ್.ಸುರೇಶ್, ಅಚ್ಚು, ಪ್ರದೀಪ್ ಸೇರಿದಂತೆ ಕ್ರೀಡಾಪಟುಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-36-1856104879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.