ರಾಮನಗರ: ಕ್ರೀಡಾ ವಸತಿ ನಿಲಯಕ್ಕೆ ಮತ್ತು ರಾಜ್ಯದ ಇತರೆ ಜಿಲ್ಲೆಗಳಲ್ಲಿರುವ ಎಲ್ಲಾ ಕ್ರೀಡಾ ಶಾಲೆಗಳಿಗೆ 2026-27ನೇ ಸಾಲಿಗೆ 8ನೇ ತರಗತಿ ಹಾಗೂ ಪ್ರಥಮ ಪಿಯುಸಿ ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ.

ಈ ಆಯ್ಕೆ ಪ್ರಕ್ರಿಯೆಗಳಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ರಾಜ್ಯದ ಕೆಲವು ಸ್ಥಳಗಳಲ್ಲಿ ವಿಶೇಷ ಆಯ್ಕೆ ಪ್ರಕ್ರಿಯೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ವಿಶೇಷ ಆಯ್ಕೆ ಪ್ರಕ್ರಿಯೆಯು ಎರಡು ಹಂತದ ಆಯ್ಕೆ ಪ್ರಕ್ರಿಯೆ ಒಳಗೊಂಡಿರುತ್ತದೆ. ತರಬೇತುದಾರರಿಂದ ಕ್ರೀಡಾವಾರು ಆಯ್ಕೆ ಪ್ರಕ್ರಿಯೆ, ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾ ವೈಜ್ಞಾನಿಕ ಪರೀಕ್ಷೆ ಆಯ್ಕೆ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಹಂತ-1: ಜೂನ್ 1ರಂದು ಬೆಳಿಗ್ಗೆ 9 ಗಂಟೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್, ಸೈಕ್ಲಿಂಗ್, ಕುಸ್ತಿ, ಜುಡೋ, ತುಮಕೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಕಬಡ್ಡಿ, ಜಿಮ್ನಾಸ್ಟಿಕ್ಸ್, ಫುಟ್ಬಾಲ್, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ಬಾಲ್, ಅರ್ಚರಿ, ಫೆನ್ಸಿಂಗ್, ಬಾಕ್ಸಿಂಗ್ ಹಾಗೂ ಬೆಂಗಳೂರಿನ ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ಹಂತ-2: ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 1ರಲ್ಲಿ ನಡೆಯುವ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಪ್ರವೇಶಕ್ಕೆ ಆಯ್ಕೆಯಾದ ಕ್ರೀಡಾಪಟುಗಳು ಜೂನ್ 4ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಸೆಂಟರ್ ಫಾರ್ ಸ್ಪೋರ್ಟ್ಸ್ ಸೈನ್ಸ್ ಗೇಟ್ ನಂ. 7 ಮತ್ತು 8ರಲ್ಲಿ ವರದಿ ಮಾಡಿಕೊಳ್ಳಬೇಕು.

ಇಲ್ಲದಿದ್ದರೆ ಕಂಠೀರವ ಕ್ರೀಡಾಂಗಣ ಮತ್ತು ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ಜೂನ್ 1ರಲ್ಲಿ ನಡೆಯುವ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಪ್ರವೇಶಕ್ಕೆ ಆಯ್ಕೆಯಾದ ಕ್ರೀಡಾಪಟುಗಳು ಜೂನ್ 5ರಂದು ಬೆಳಿಗ್ಗೆ 8.30ಕ್ಕೆ ಕಂಠೀರವ ಕ್ರೀಡಾಂಗಣದ ಸೆಂಟರ್ ಫಾರ್ ಸ್ಪೋರ್ಟ್ಸ್ ಸೈನ್ಸ್ ಗೇಟ್ ನಂ. 7 ಮತ್ತು 8ರಲ್ಲಿ ವರದಿ ಮಾಡಿಕೊಳ್ಳಬೇಕು. ಮಾಹಿತಿಗೆ ಕಚೇರಿ ಮೊ: 9113535733 ಅಥವಾ ಅಧಿಕಾರಿ ನಯನಾ ಮೊ: 9606670580 ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲಾ ಕಚೇರಿಗೆ ಖುದ್ದು ಭೇಟಿ ನೀಡಬೇಕು. ಇಲ್ಲದಿದ್ದರೆ ಅಧೀಕ್ಷಕ ಮೊಬೈಲ್ ಸಂಖ್ಯೆ: 9945533431 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-14-1911394536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.