ಸಾಗರ: ‘ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢಗೊಳ್ಳುತ್ತದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಗೋಪಾಲಗೌಡ ಕ್ರೀಡಾಂಗಣದ ಪಕ್ಕದಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ₹ 8 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ವಿದ್ಯುದ್ದೀಪ ವ್ಯವಸ್ಥೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಯುವಕರು, ಮಧ್ಯ ವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಬದಲಾಗಿರುವ ಜೀವನ ಶೈಲಿ, ಆಹಾರ ಪದ್ಧತಿ, ಹೆಚ್ಚುತ್ತಿರುವ ಮಾನಸಿಕ ಒತ್ತಡ ಮೊದಲಾದ ಕಾರಣಗಳಿಂದ ಕಾಯಿಲೆಗಳು ಹೆಚ್ಚುತ್ತಿವೆ. ಇವುಗಳಿಂದ ದೂರವಿರಲು ಕ್ರೀಡೆ ಉತ್ತಮ ಸಾಧನ’ ಎಂದು ತಿಳಿಸಿದರು.

‘ಇಲ್ಲಿನ ಒಳಾಂಗಣ ಕ್ರೀಡಾಂಗಣ ನಗರದ ಹೃದಯ ಭಾಗದಲ್ಲಿದೆ. ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಒಳಾಂಗಣ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ವಿಶಾಲವಾದ ಸ್ಥಳಾವಕಾಶವಿದೆ. ಯುವಜನರು ಸೇರಿ ವಿವಿಧ ವಯೋಮಾನದವರು ಇದರ ಸದುಪಯೋಗ ಪಡೆಯಬೇಕು’ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಕ್ರೀಡಾಂಗಣ ಸಮಿತಿ ಸದಸ್ಯರಾದ ಐ.ಎನ್.ಸುರೇಶ್ ಬಾಬು, ಕಿರಣ್ ದೊಡ್ಮನೆ, ಮಹಾಬಲ ಕೌತಿ, ಪ್ರಮುಖರಾದ ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಕೋರಿ ನಿರಂಜನ, ವಿಭವ ಕೆ.ಆರ್. ಅನ್ವರ್ ಭಾಷಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-42-2001049519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.