ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಜೈ ಕರ್ನಾಟಕ ವಾಲಿಬಾಲ್ ಸಂಸ್ಥೆಯಿಂದ ಹಿರಿಯ ಮತ್ತು ಕಿರಿಯ ವಾಲಿಬಾಲ್ ಆಟಗಾರರ ನೆನಪಿನಾರ್ಥವಾಗಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಯಿತು.,

ಸರ್ಜಾಪುರದ ಜೈಭೀಮ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ₹1 ಲಕ್ಷ ನಗದು, ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಹಾಸನ ತಂಡವು ದ್ವಿತೀಯ ಬಹುಮಾನ ₹75 ಸಾವಿರ ನಗದು, ಟ್ರೋಫಿ, ತೃತೀಯ ಬಹುಮಾನ ಪಡೆದ ಮೇಲೂರು ರಿಪಬ್ಲಿಕ್ ತಂಡವು ₹50 ಸಾವಿರ ನಗದು, ಟ್ರೋಪಿ ಪಡೆಯಿತು. ನಾಲ್ಕನೇ ಸ್ಥಾನ ಪಡೆದ ಬೆಂಗಳೂರು ನಗರದ ರೆಡ್ಡಿ ತಂಡವು ₹25 ಸಾವಿರ ನಗದು, ಟ್ರೋಪಿ ಪಡೆಯಿತು.

ವಾಲಿಬಾಲ್ ಟೂರ್ನಿಮೆಂಟ್ಗೆ ಚಾಲನೆ ನೀಡಿ, ಮಾತನಾಡಿದ ಶಾಸಕ ಬಿ.ಎನ್.ರವಿಕುಮಾರ್, ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ಜೊತೆಗೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಕ್ರೀಡೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆಗೊಳ್ಳಬೇಕು. ಈ ಮೂಲಕ ಯುವ ಸಮೂಹದಲ್ಲಿ ಒಗ್ಗಟ್ಟಿನ ಜೊತೆಗೆ ಅವರನ್ನು ಸಂಘಟಿತರನ್ನಾಗಿ ಮಾಡಲು ಹೆಚ್ಚು ಸಹಕಾರಿಯಾಗಲಿದೆ ಎಂದರು.

ಕ್ರೀಡೆಗಳನ್ನು ಕ್ರೀಡಾಸ್ಫೂರ್ತಿಯಿಂದ ಆಡುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಗ್ರಾಮದ ಹಿರಿಯ ವಾಲಿಬಾಲ್ ಆಟಗಾರರನ್ನು ಸನ್ಮಾನಿಸಲಾಯಿತು. ಕ್ರೀಡಾ ಪಟುಗಳಿಗೆ ಮತ್ತು ಪಂದ್ಯಗಳ ವೀಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿತ್ತು.

ಗಂಗಾದೇವಿ ಟ್ರಸ್ಟ್ ಧರ್ಮದರ್ಶಿ ರಾಮಕೃಷ್ಣಪ್ಪ, ಜೈ ಕರ್ನಾಟಕ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಸಿ.ಎನ್.ಸೂರೇಗೌಡ, ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ವಹ್ನಿಕುಲ ರಾಜ್ಯ ಸಂಘದ ನಿರ್ದೇಶಕ ಶಿವರಾಜ್, ವಾಲ್ಮೀಕಿ ಸಂಘದ ಅಧ್ಯಕ್ಷ ಗಿರೀಶ್ ನಾಯಕ್, ಆಯೋಜಕರಾದ ಎಸ್.ಎನ್.ಪಾರ್ಥಸಾರಥಿ, ಟಿ.ವಿಜಯಕುಮಾರ್, ರಾಜು,(ಕೆ.ಜಿ.ಎಫ್), ಪ್ರದೀಪ್ ಜೋಗಿ, ಆರ್.ಚಂದ್ರೇಗೌಡ, ತಿಮ್ಮರಾಜು, ಡಿ.ಮುನಿಶಾಮಯ್ಯ, ಅಣ್ಣಪ್ಪ, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-16-313663052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.