ಶಿಡ್ಲಘಟ್ಟ: ನೇಪಾಳದ ಕಠ್ಮಂಡುವಿನಲ್ಲಿ ನಡೆದ 3ನೇ ಅಂತರರಾಷ್ಟ್ರೀಯ ಟಾರ್ಗೆಟ್ ಬಾಲ್ ಅಚೀವರ್ಸ್ ಕಪ್ 2026ರಲ್ಲಿ ಭೂತಾನ್ ದೇಶದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಆ ತಂಡದಲ್ಲಿ ಶಿಡ್ಲಘಟ್ಟದ ಎ.ಪವನ್ ಕುಮಾರ್ ದೇಶವನ್ನು ಪ್ರತಿನಿಧಿಸಿದ್ದಾರೆ.

ಶಿಡ್ಲಘಟ್ಟದ ಅಂಜನಾದ್ರಿ ಬಡಾವಣೆಯ ಎ.ಪವನ್ ಕುಮಾರ್ ರಾಜ್ಯ, ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು.

ನೇಪಾಳದ ಕಠ್ಮಂಡುವಿನಲ್ಲಿ ಮೇ 3 ರಿಂದ 7ರವರೆಗೆ ನಡೆದ 3ನೇ ಅಂತರರಾಷ್ಟ್ರೀಯ ಟಾರ್ಗೆಟ್ ಬಾಲ್ ಅಚೀವರ್ಸ್ ಕಪ್ 2026ರಲ್ಲಿ ಭಾರತ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿದೆ.

ಪವನ್ ಕುಮಾರ್ ಶಾಲಾ ಶಿಕ್ಷಣವನ್ನು ವಾಸವಿ ವಿದ್ಯಾ ಸಂಸ್ಥೆಯಲ್ಲಿ, ಕಾಲೇಜು ಶಿಕ್ಷಣವನ್ನು ಜ್ಞಾನಜ್ಯೋತಿ ಮತ್ತು ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಮಾಡಿದ್ದು, ರೇವಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

‘ದೇಶವನ್ನು ಪ್ರತಿನಿಧಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಾಂಪಿಯನ್ ಶಿಪ್ ಗೆದ್ದಿರುವುದು ಹೆಮ್ಮೆ ಎನಿಸಿದೆ. ಇನ್ನಷ್ಟು ಸಾಧನೆ ಮಾಡಲು ಉತ್ಸಾಹ ಮೂಡಿದೆ. ನಮ್ಮ ತರಬೇತುದಾರರಿಗೆ ಇದರ ಶ್ರೇಯಸ್ಸು ಸಲ್ಲುತ್ತದೆ’ ಎಂದು ಎ.ಪವನ್ ಕುಮಾರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-16-31444878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.