ಶಿವಮೊಗ್ಗ: ‘ಕ್ರಿಕೆಟ್ ಟೂರ್ನಿಯನ್ನು ಮೈದಾನದಲ್ಲಿ ಕುಳಿತು ವೀಕ್ಷಿಸುವ ಅನುಭವ ನೀಡುವ ಐಪಿಎಲ್ ಫ್ಯಾನ್ ಪಾರ್ಕ್ ಶಿವಮೊಗ್ಗದಲ್ಲೂ ಆರಂಭವಾಗುತ್ತಿದೆ. ಮೇ 16ರಂದು ಸಂಜೆ 6.30ಕ್ಕೆ ಹಾಗೂ ಮೇ 17ರಂದು ಮಧ್ಯಾಹ್ನ 2.30ರಿಂದ ಎನ್ಇಎಸ್ ಮೈದಾನದಲ್ಲಿ ಕುಳಿತು ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಐಪಿಎಲ್ ಶಿವಮೊಗ್ಗ ವಿಭಾಗದ ಸಂಚಾಲಕ ನಾಗೇಂದ್ರ ಪಂಡಿತ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಅಲ್ಲಿ ಐಪಿಎಲ್ ಮ್ಯಾಚ್ಗಳನ್ನು ದೊಡ್ಡ ಪರದೆಗಳಲ್ಲಿ ತೋರಿಸಲಾಗುತ್ತಿದೆ. ಸುಮಾರು ಐದು ಸಾವಿರ ಮಂದಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ’ ಎಂದರು.

‘ಕ್ರಿಕೆಟ್ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಹೋಗಲು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ. ಅವರಿಗೆಲ್ಲ ಕ್ರೀಡಾಂಗಣದಲ್ಲೇ ಕುಳಿತು ನೋಡುವ ಅನುಭವ ಸೃಷ್ಟಿಸಲಾಗುತ್ತಿದೆ. ಇಲ್ಲಿ ಆಸನದ ವ್ಯವಸ್ಥೆ ಇರುವುದಿಲ್ಲ. ಜಮಖಾನದಲ್ಲಿ ಕುಳಿತು ಅಥವಾ ನಿಂತುಕೊಂಡೇ ಕ್ರಿಕೆಟ್ ಪಂದ್ಯದ ನೇರ ಪ್ರಸಾರ ಆನಂದಿಸಬೇಕು. ಕ್ರಿಕೆಟ್ ವೀಕ್ಷಣೆ ಜೊತೆಗೆ ಆಹಾರ ಮಳಿಗೆ, ಗೇಮ್ ಜೋನ್ ಇರುತ್ತವೆ. ಈಗಾಗಲೇ ದೇಶದ ಹಲವು ನಗರಗಳಲ್ಲಿ ಈ ರೀತಿ ಆಯೋಜನೆ ಮಾಡಲಾಗಿದೆ. ಅದಕ್ಕೆ ಕ್ರಿಕೆಟ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದರು.

‘ಸಾರ್ವಜನಿಕರಿಗೆ ಮುಕ್ತ ಅವಕಾಶವಿರುತ್ತದೆ. ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಲಕ್ಕಿ ಡ್ರಾ ಕೂಡಾ ಇರುತ್ತದೆ. ಇದೊಂದು ಅದ್ಭುತ ಕ್ಷಣ. ಶಿವಮೊಗ್ಗದ ಕ್ರಿಕೆಟ್ ಪ್ರೇಮಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಕೋರಿದರು.

ಈ ಫ್ಯಾನ್ ಪಾರ್ಕ್ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಟಾಟಾ ಐಪಿಎಲ್ ಸಹಕಾರದಲ್ಲಿ ನಡೆಯು ತ್ತಿದೆ. ಆ ದಿನ ಕೆಕೆಆರ್ ಮತ್ತು ಜಿಟಿ ನಡುವೆ ಹಾಗೂ ಪಂಜಾಬ್ ಕಿಂಗ್ಸ್ ಮತ್ತು ಆರ್ಸಿಬಿ ನಡುವೆ ಹಾಗೂ ಡೆಲ್ಲಿ ಕ್ಯಾಪ್ಟನ್ಸ್, ಆರ್ಆರ್ ಪಂದ್ಯಗಳು ನಡೆಯಲಿವೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-42-1786745259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.