ಶ್ರವಣಬೆಳಗೊಳ: ಎಲ್ಲಾ ರೀತಿಯ ಕ್ರೀಡೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸುವುದರಿಂದ ಪರಸ್ಪರ ಉತ್ತಮ ಬಾಂಧವ್ಯ ವೃದ್ಧಿಯಾಗಲಿದ್ದು, ಭವಿಷ್ಯದಲ್ಲಿ ಸೌಹಾರ್ದಯುತವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಶನಿವಾರ ಹೇಳಿದರು.

ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಬಾಹುಬಲಿ ಜೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂಧ್ಯ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪ್ರಥಮ ಬಾರಿಗೆ ಕ್ಷೇತ್ರದ ವತಿಯಿಂದ ನಡೆಯುತ್ತಿರುವ ಪಂದ್ಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 15 ತಂಡಗಳು ಭಾಗವಹಿಸಿದ್ದು, ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಕ್ಷೇತ್ರದ ಪೀಠಾಧಿಪತಿ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮಾನಸಿಕ ಆರೋಗ್ಯ ಉತ್ತಮವಾಗುತ್ತದೆ ಎಂದು ಹೇಳಿದರು.

ಕ್ಷೇತ್ರವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವಾಗಲು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದು, ಕ್ರೀಡೆಗೂ ಸಹ ಮುಂದಿನ ದಿನಗಳಲ್ಲಿ ಉತ್ತಮ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಾಹುಬಲಿ ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರಾಂಶುಪಾಲ ಡಿ.ಸುನೀಲ್ ಕುಮಾರ್, ಕಾರ್ಯದರ್ಶಿ ಬಬನ್ ಪಿ ದತ್ತವಾಡೆ, ಪದಾಧಿಕಾರಿಗಳಾದ ಶ್ರೇಯಸ್ ಜೈನ್, ರಾಜೇಶ್ ಜೈನ್, ನೇಮೀಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಲಕ್ಷ್ಮಣ್, ಎಸ್.ಎಂ.ಜನಾರ್ದನ್, ಸಾಗರ್ ಗೌಡ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-36-360983031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.