ಸೋಮವಾರಪೇಟೆ: ಅಬ್ಬೂರುಕಟ್ಟೆ ಪ್ರೀಮಿಯರ್ ಲೀಗ್ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆದು, ಹೊಸಳ್ಳಿ ತಂಡ ಗೆಲುವು ಸಾಧಿಸಿತು.

ಹೊಸಳ್ಳಿ ಮತ್ತು ತಣ್ಣೀರುಹಳ್ಳ ತಂಡಗಳು ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದವು.

ರೋಚಕ ಪಂದ್ಯದಲ್ಲಿ ಹೊಸಳ್ಳಿ ತಂಡ 6 ರನ್ಗಳಿಂದ ವಿಜೇತರಾಗಿ ನಗದು ಮತ್ತು ಟ್ರೋಫಿ ಪಡೆದರೆ, ತಣ್ಣೀರುಹಳ್ಳ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆಯಿತು.

ಟೂರ್ನಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಚಾಲನೆ ನೀಡಿದರು.

ಅವರು ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿದರೆ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.

ಸಂಜೆ ನಡೆದ ಬಹುಮಾನವಿತರಣಾ ಕಾರ್ಯಕ್ರಮದಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನೋದ್ ಕುಮಾರ್, ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂರ್ತಿ, ಮೋರಿಕಲ್ಲು ದೇವಾಲಯದ ಅಧ್ಯಕ್ಷ ಪ್ರಭಾಕರ್, ಅರೆಯೂರು ಸುರೇಶ್ ತಂಡಗಳಿಗೆ ಬಹುಮಾನ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-9056267

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.