ಸೋಮವಾರಪೇಟೆ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಯಲ್ಲಿ ಎಜಿಓಆರ್ಸಿ ತಂಡ ಪ್ರಶಸ್ತಿಯೊಂದಿಗೆ ₹2 ಲಕ್ಷ ಬಹುಮಾನ ಪಡೆಯಿತು.

ಅಂತಿಮ ಪಂದ್ಯಾಟದಲ್ಲಿ ಸದರ್ನ್ ಕಮಾಂಡ್ ತಂಡವನ್ನು 3–2 ಗೋಲುಗಳ ಅಂತರದಿಂದ ಸೋಲಿಸಿತು. ಸದರ್ನ್ ಕಮಾಂಡ್ ತಂಡ ₹1 ಲಕ್ಷ ನಗದು ಹಾಗೂ ಟ್ರೋಫಿಯನ್ನು ಪಡೆದುಕೊಂಡಿತು.

ಇದಕ್ಕೂ ಮುನ್ನ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯಾಟದಲ್ಲಿ ಆತಿಥೇಯ ಯಿಫಾ ತಂಡವನ್ನು ಕೆನರಾ ಬ್ಯಾಂಕ್ ತಂಡ ಮಣಿಸಿತು. ವಿಜೇತ ಕೆನರಾ ಬ್ಯಾಂಕ್ ತಂಡಕ್ಕೆ ₹50 ಸಾವಿರ ನಗದು ಹಾಗೂ ಟ್ರೋಫಿ ವಿತರಿಸಲಾಯಿತು.

ಅಂತಿಮ ಪಂದ್ಯದ ಪ್ಲೇಯರ್ ಆಫ್ ದ ಮ್ಯಾಚ್ ಪ್ರಶಸ್ತಿಯನ್ನು ಎಜಿಓಆರ್ಸಿ ತಂಡದ ನಲ್ಲುಲ್ಲಿ ಸೂರ್ಯ ಪಡೆದರು. ಟೂರ್ನಿಯ ಬೆಸ್ಟ್ ಗೋಲ್ ಕೀಪರ್ ಆಗಿ ಕಸ್ಟಮ್ಸ್ ತಂಡದ ಶಾನ್, ಪ್ಲೇಯರ್ಸ್ ಆಫ್ ದ ಟೂರ್ನಮೆಂಟ್ ಆಗಿ ಸದರ್ನ್ ಕಮಾಂಡ್ ತಂಡದ ರಜಂತ್ ಸಿಂಗ್, ಬೆಸ್ಟ್ ಡಿಫೆಂಡರ್ ಎಜಿಓಆರ್ಸಿಯ ಸಾತ್ವಿಕ್, ಹೆಚ್ಚು ಗೋಲು ಬಾರಿಸಿದ ಆಟಗಾರನಾಗಿ ಎಜಿಓಆರ್ಸಿಯ ತ್ರಿಶೂಲ್, ಬೆಸ್ಟ್ ಫಾರ್ವರ್ಡ್ ಆಟಗಾರನಾಗಿ ಯಿಫಾ ತಂಡದ ಧ್ರುವ, ಬೆಸ್ಟ್ ಮಿಡ್ ಫೀಲ್ಡರ್ ಆಗಿ ಕೆನರಾ ಬ್ಯಾಂಕ್ ತಂಡದ ನಕುಲ್ ಅವರು ಬಹುಮಾನ ಪಡೆದರು.

ಮಾಜಿ ಕ್ರೀಡಾ ಸಚಿವ ಎಂ.ಪಿ.ಅಪ್ಪಚ್ಚುರಂಜನ್, ತಪೋಕ್ಷೇತ್ರ ಮನೆಹಳ್ಳಿ ಮಠಾಧೀಶ ಮಹಾಂತ ಶಿವಲಿಂಗ ಸ್ವಾಮೀಜಿ, ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಷಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ, ಭಾರತೀಯ ಕ್ರೀಡಾ ಪ್ರಾಧಿಕಾರದ ಪ್ರಾದೇಶಿಕ ನಿರ್ದೇಶಕ ವಿಷ್ಣು ಸುಧಾಕರನ್, ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ, ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕಾಳಪ್ಪ, ಲೀಡಿಂಗ್ ಎಡ್ಜ್ ಸಂಸ್ಥೆಯ ಮಾಲೀಕ ಎಡಿಕೇರಿ ಪ್ರಸನ್ನ, ಭಾರತೀಯ ಮಹಿಳಾ ಹಾಕಿ ತಂಡದ ಮಾಜೀ ತರಬೇತುಗಾರ್ತಿ ದೇವರಾಜಮ್ಮ ಬಹುಮಾನ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-727737552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.