ಸೋಮವಾರಪೇಟೆ: ಇಲ್ಲಿನ ಹಿಂದೂಸ್ತಾನ್ ಫುಟ್ಬಾಲ್ ಕ್ಲಬ್ ವತಿಯಿಂದ 40 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಲೆಜೆಂಡ್ಸ್ ಫುಟ್ಬಾಲ್ ಟೂರ್ನಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏ. 25 ಮತ್ತು 26 ರಂದು ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಬಿ.ಎಸ್.ಯತೀಶ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಪ್ರಥಮ ಬಾರಿಗೆ ಇಂತಹ ಟೂರ್ನಿ ಆಯೋಜಿಸಲಾಗಿದೆ. ಟೂರ್ನಿಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಹೊರ ರಾಜ್ಯಗಳಿಂದ ತಂಡಗಳು ಬರಲಿವೆ ಎಂದು ಹೇಳಿದರು.

ವಿಜೇತ ತಂಡಕ್ಕೆ ಪ್ರಥಮ ಬಹುಮಾನ ₹50 ಸಾವಿರ, ದ್ವಿತೀಯ ಬಹುಮಾನ ₹30 ಸಾವಿರ ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. ತಂಡದಲ್ಲಿ 6+2 ಆಟಗಾರರಿಗೆ ಮಾತ್ರ ಅವಕಾಶ ಇರುತ್ತದೆ. ಏ.23 ನೋಂದಣಿಗೆ ಕೊನೆ ದಿನಾಂಕ. ಹೆಚ್ಚಿನ ಮಾಹಿತಿಗೆ ಮೊ: 9945575803, 8722098606 ಸಂಪರ್ಕಿಸಬಹುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಶರತ್ ಚಂದ್ರ, ಖಚಾಂಚಿ ಮಧು ಕಿಬ್ಬೆಟ್ಟ, ಸಂಯೋಜಕ ಎಸ್.ಆರ್.ಸೋಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-1106424111

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.