ಸೋಮವಾರಪೇಟೆ: ಬ್ಲೂಸ್ಟಾರ್ ಹಾಕಿ ಸಂಸ್ಥೆಯಿಂದ ಏ.13ರಿಂದ 18 ವಯೋಮಾನದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ಈಜು ತರಬೇತಿ ಶಿಬಿರ ನಡೆಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಬಿ. ಯಶ್ವಂತ್ ತಿಳಿಸಿದರು.

‘20 ವರ್ಷಗಳಿಂದ ಸಂಸ್ಥೆಯಿಂದ ತರಬೇತಿ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿದಿನ ಸಂಜೆ 4ರಿಂದ 6.30ರವರೆಗೆ ಸಮೀಪದ ಕೋವರ್ ಕೊಲ್ಲಿಯ ಬ್ಲಾಸಮ್ ರೆಸಾರ್ಟ್ ಈಜುಕೊಳದಲ್ಲಿ ನುರಿತ ಈಜು ತರಬೇತುದಾರರಿಂದ ತರಬೇತಿ ನೀಡಲಾಗುವುದು. ವಾಹನ ಸೌಲಭ್ಯ ಇಲ್ಲದವರಿಗೆ ಪಟ್ಟಣದಿಂದ ವಾಹನ ಸೌಲಭ್ಯವನ್ನು ಕಲ್ಪಿಸಲಾಗುವುದು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮುಂದಿನ ಸಾಲಿನಿಂದ ಈಜು ತರಬೇತಿ ಜೊತೆಗೆ ಅಥ್ಲೆಟಿಕ್ಸ್ ತರಬೇತಿಯನ್ನೂ ನೀಡಲಾಗುವುದು. ಆಸಕ್ತರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು. ಮಾಹಿತಿಗೆ 9449831446, 9342563014 ಸಂಪರ್ಕಿಸಬಹುದು’ ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ತರಬೇತುದಾರರಾದ ಬಿ.ಟಿ. ಪೂರ್ಣೇಶ್, ಮಂಜುನಾಥ್, ಬ್ಲೂ ಸ್ಟಾರ್ ಹಾಕಿ ಸಂಸ್ಥೆಯ ಅಭಿ ಗೋವಿಂದಪ್ಪ, ಕಿಬ್ಬೆಟ್ಟ ಮಧು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-51-1122690127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.