ಉಡುಪಿ: ನಗರದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ವಿ.ಪಿ.ಎಲ್.-2 ಕ್ರಿಕೆಟ್ ಟೂರ್ನಿಯನ್ನು ಶಾಸಕ ಯಶ್ಪಾಲ್ ಸುವರ್ಣ ಈಚೆಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉಡುಪಿಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ಜಿಲ್ಲೆಗೊಂದು ಕ್ರಿಕೆಟ್ ಸ್ಟೇಡಿಯಂ ಬೇಕು ಎಂಬುದು ಕ್ರಿಕೆಟ್ ಆಟಗಾರರ ಬಹುದಿನದ ಕನಸು. ಆ ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇನೆ. ಸುಸಜ್ಜಿತವಾದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಸರ್ಕಾರಕ್ಕೆ ಬೇಡಿಕೆ ಇಡುತ್ತೇನೆ ಎಂದರು.

ಪ್ರಸಾದ್ ನೇತ್ರಾಲಯದ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು, ವಕೀಲ ಶ್ರೀನಿಧಿ ಹೆಗ್ಡೆ, ಉಜ್ವಲ್ ಗ್ರೂಪಿನ ಆಡಳಿತ ನಿರ್ದೇಶಕ ಅಜಯ್ ಪಿ. ಶೆಟ್ಟಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಕೆ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ರಾವ್ ಡಿ., ಕ್ರೀಡಾ ಕಾರ್ಯದರ್ಶಿ ಕಾರ್ತಿಕ್ ಹೆಬ್ರಿ, ನಿಶ್ಚಿತಾ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀವತ್ಸ ಗಾಂವಸ್ಕರ್ ಸ್ವಾಗತಿಸಿದರು. ಶಮಂತ್ ವಂದಿಸಿದರು. ದೀಪಕ್ ಕಾಮತ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-1555287089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.