ಉಜಿರೆ: ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಟೂರ್ನಿಯಲ್ಲಿ ಭಾಗವಹಿಸಬೇಕು ಎಂದು ಪ್ರೊ ಕಬಡ್ಡಿ ಆಟಗಾರ ಶಿವಮೊಗ್ಗದ ಗಗನ್ ಗೌಡ ಹೇಳಿದರು.

ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಉಜಿರೆಯ ಇಂದ್ರಪ್ರಸ್ಥ ಸಭಾಂಗ ಣದಲ್ಲಿ ಆಯೋ ಜಿಸಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ಮಂಗಳೂರು ವಿಭಾಗದ ಅಂತರ ಕಾಲೇಜು ಪುರುಷರ ಕಬಡ್ಡಿ ಟೂರ್ನಿ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಾಲು ಎಸ್ಡಿಎಂ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಮಾತನಾಡಿ, ಪ್ರೊ ಕಬಡ್ಡಿ ಬಂದ ಮೇಲೆ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಕ್ರೀಡಾಪಟುಗಳು ಈಗ ಆಸಕ್ತಿಯಿಂದ ಕಬಡ್ಡಿಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಶೋಕ ಕುಮಾರ್ ಟಿ. ಮಾತನಾಡಿ, ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ₹ 5 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಗೊಳ್ಳುತ್ತಿದ್ದು, ಸದ್ಯದಲ್ಲೆ ಉದ್ಘಾಟನೆಗೊಳ್ಳಲಿದೆ ಎಂದರು.

ಎಸ್ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ ಎಚ್., ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ ಎ. ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಅನಿಶ್ ಮತ್ತು ಕಲ್ಪಿತಾ ಕಾರ್ಯಕ್ರಮ ನಿರ್ವಹಿಸಿದರು. ಮಂಗಳೂರು ವಿಭಾಗದ 12 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-1905064694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.