ಉಜಿರೆ: ‘ಭಾರತದ ದೇಶೀಯ ಕ್ರೀಡೆ ಕಬಡ್ಡಿ ಇಂದು ವಿದೇಶಗಳಲ್ಲೂ ಜನಪ್ರಿಯವಾಗುತ್ತಿದೆ. ಶಿಸ್ತು, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದೊಂದಿಗೆ ನಿರಂತರ ಅಭ್ಯಾಸ ಮಾಡಿ ದೇಹವನ್ನು ಪಳಗಿಸಿಕೊಂಡರೆ ಕಬಡ್ಡಿಯಲ್ಲಿ ಉನ್ನತ ಸಾಧನೆ ಮಾಡಬಹುದು’ ಎಂದು ಅಂತರರಾಷ್ಟ್ರೀಯ ಕಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಹೇಳಿದರು.

ಉಜಿರೆ ಎಸ್ಡಿಎಂ ಎಂಜಿನಿಯಿಂಗ್ ಕಾಲೇಜಿನ ಆಶ್ರಯದಲ್ಲಿ ಎಸ್ಡಿಎಂ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. (ವಿಟಿಯು) ಪುರುಷರ ಅಂತರ ಕಾಲೇಜು ಕಬಡ್ಡಿ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳಿಗೆ ಉತ್ತಮ ವೇತನದೊಂದಿಗೆ ದೇಶ- ವಿದೇಶಗಳಲ್ಲಿ ವಿಪುಲ ಉದ್ಯೋಗ ಅವಕಾಶಗಳಿವೆ. ಕ್ರೀಡಾಪಟುಗಳು ಹೆಚ್ಚು ಭಾಷೆಗಳನ್ನು ಕಲಿಯಬೇಕು ಎಂದೂ ಅವರು ಸಲಹೆ ನೀಡಿದರು. ಆರು ಮಂದಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರರನ್ನು ರೂಪಿಸಿದ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕೊಡುಗೆ ಶ್ಲಾಘನೀಯ ಎಂದರು.

ಎಸ್ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ, ಬೆಳ್ತಂಗಡಿ ಉಪವಲಯ ಅರಣ್ಯಾಧಿಕಾರಿ ರಂಜಿತ್ ಕುಮಾರ್ ಮಾತನಾಡಿ, ಕ್ರೀಡಾಪಟುಗಳು ಸಮಚಿತ್ತ ಮತ್ತು ದೃಢ ಸಂಕಲ್ಪದೊಂದಿಗೆ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಎಂಜಿನಿ ಯರಿಂಗ್ ಕಾಲೇಜಿನ ಪ್ರಾಂಶು ಪಾಲ ಅಶೋಕಕುಮಾರ್ ಟಿ. ಮಾತನಾಡಿದರು. ಎಸ್ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ, ಕಬಡ್ಡಿ ತರಬೇತುದಾರ ಬಿ.ಕೆ. ಕೃಷ್ಣಾನಂದ, ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ ಎ. ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಅನೀಶ್ ಮತ್ತು ಕಲ್ಪಿತಾ ನಿರ್ವಹಿಸಿದರು. ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-29-880911895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.