ಹಳಿಯಾಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯ ವಿಭಾಗ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಲ್ಲಿನ ಕರ್ನಾಟಕ ಲಾ ಸೊಸೈಟಿಯ ವಿಡಿಐಟಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಮೇ 4 ಮತ್ತು 5 ರಂದು ಎಜಿಎಂಆರ್ ವರೂರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಚಿಕ್ಕೋಡಿಯ ಕೆಎಲ್ಇ ತಾಂತ್ರಿಕ ಮಹಾವಿದ್ಯಾಲಯದ ತಂಡವನ್ನು ಮಣಿಸಿ ವಿಡಿಐಟಿ ಜಯ ಗಳಿಸಿದೆ.

ಶೀತಲ್, ಆಕಾಶ್, ಪ್ರಜ್ವಲ್, ನ್ಯೂಮನ್, ಕಾರ್ತಿಕ್, ನಿಖಿಲ್, ರಿಹಾನ್ಬಕ್ಷ, ಕಾರ್ತಿಕ್ ಜಿ, ಪೃಥ್ವಿ, ದಿನೇಶ್, ಅಕಿಬ್ ಅಹಮದ್, ಮಹಮದ್ ಉಜೆಫಾ ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಿದ್ದರು.

ಮೇ 7 ಮತ್ತು 8ರಂದು ತುಮಕೂರಿನ ಎಸ್ಐಟಿ ಮಹಾವಿದ್ಯಾಲಯದಲ್ಲಿ ನಡೆಯರುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ವಿಡಿಐಟಿ ತಂಡ ಅರ್ಹತೆ ಪಡೆದುಕೊಂಡಿದೆ.

ಆಡಳಿತ ಮಂಡಳಿ ಅಧ್ಯಕ್ಷ ಪ್ರಶಾಂತ್ ಕುಲಕರ್ಣಿ ಹಾಗೂ ಪ್ರಾಚಾರ್ಯ ಡಾ.ವಿ.ಎ.ಕುಲಕರ್ಣಿ, ದೈಹಿಕ ಶಿಕ್ಷಣ ನಿರ್ದೇಶಕ ಗದಿಗಪ್ಪ ಎಳ್ಳೂರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-20-1614372045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.