ವಿಜಯಪುರ: ರಾಜ್ಯದ ಯುವ ಕ್ರೀಡಾ ಪ್ರತಿಭೆಗಳಿಗೆ ವಿಜಯಪುರದಲ್ಲಿ ಆರಂಭವಾಗಿರುವ ಬ್ಯಾಡ್ಮಿಂಟನ್ ಪಂದ್ಯ ಉತ್ತಮ ವೇದಿಕೆಯಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯಪುರದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿಯನ್ನು ಬೃಹತ್ ಪ್ರಮಾಣದಲ್ಲಿ ಆಯೋಜಿಸಿದ್ದೇವೆ. ಜೊತೆಗೆ ಇಲ್ಲಿ ಕ್ರೀಡೆಗೆ ಮಹತ್ತರ ಅವಕಾಶವಿದೆ ಎಂಬುದು ಸಾಬೀತಾಗಿದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಮೆರೆಯಲಿ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದರು.

ಜಿಲ್ಲೆಗೆ ಹೊಸ ಔಟ್ಲುಕ್: ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬ್ಯಾಡ್ಮಿಂಟನ್ ಟೂರ್ನಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಔಟ್ಲುಕ್ ನೀಡಿದೆ. ಜೊತೆಗೆ ರಾಷ್ಟ ಮಟ್ಟದಲ್ಲಿನ ಕ್ರೀಡಾಕ್ಷೇತ್ರದಲ್ಲಿ ಪ್ರೋತ್ಸಾಹ ಸಿಗುತ್ತದೆ. ಯುವಪ್ರತಿಭೆಗಳು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿ ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಆಶಿಸಿದರು.

ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರು ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರರಾಗಿದ್ದರು. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ಅದೇ ಮೊದಲ ಬಾರಿಗೆ ಶಾಸಕನಾಗಿದ್ದೆ. ಅವರು ಬ್ಯಾಡ್ಮಿಂಟನ್ಗೆ ಹೆಚ್ಚು ಒತ್ತು ನೀಡಿದ್ದರು. ಈಗ ಅವರ ಪುತ್ರ ಕುಮಾರ್ ಬಂಗಾರಪ್ಪನವರು ಯುವ ತಂಡ ಕಟ್ಟಿಕೊಂಡು ಬ್ಯಾಡ್ಮಿಂಟನ್ ಆಟೋಟಗಳನ್ನು ಮುನ್ನಡೆಸುತ್ತಿರುವುದನ್ನು ಸಚಿವರು ಪ್ರಶಂಸಿಸಿದರು.

ಶಾಸಕ ವಿಠಲ ಕಟಕದೊಂಡ ಮಾತನಾಡಿ, ಬ್ಯಾಡ್ಮಿಂಟನ್ ಅಂದರೆ ಬಂಗಾರಪ್ಪ, ಬಂಗಾರಪ್ಪ ಅಂದರೆ ಬ್ಯಾಡ್ಮಿಂಟನ್ ಎನ್ನುವಷ್ಟು ಅವರು ಆಟವಾಡುತ್ತಿದ್ದರು. ಇದೀಗ ಅವರ ಹಾದಿಯಲ್ಲೇ ಪುತ್ರ ಕುಮಾರ್ ಬಂಗಾರಪ್ಪ ಮುನ್ನೆಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಯಾವುದೇ ಆಟೋಟ ಹಾಗೂ ಕಾರ್ಯಕ್ರಮಗಳಿಗೆ ನಮ್ಮ ಜಿಲ್ಲೆಯ ಆತಿಥ್ಯ ನೀಡಲಿದೆ. ಅತಿಥಿಗಳು ಬಂದರೆ, ಊಟೋಪಚಾರ ಹಾಗೂ ಸತ್ಕಾರಕ್ಕೆ ನಮ್ಮ ಜಿಲ್ಲೆ ಹೆಸರುವಾಸಿಯಾಗಿದೆ. ಕುಮಾರ್ ಬಂಗಾರಪ್ಪನವರು ಬ್ಯಾಡ್ಮಿಂಟನ್ ಪಂದ್ಯಾಟ ಆಯೋಜಿಸಿದ್ದಾರೆ. ಅವರಿಗೂ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.

ವಿವಿಧ ಕ್ರೀಡಾಕೂಟಗಳಲ್ಲಿ ವಿಜಯಪುರ ಜಿಲ್ಲೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಭವಿಷ್ಯದ ದಿನಗಳಲ್ಲೂ ಯಾವುದೇ ಕ್ರೀಡೆ ನಡೆದರೂ ಸಹಕಾರ ನೀಡಲಾಗುವುದು ಎಂದರು.

ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಮೇಯರ್ ಮಡಿವಾಳಪ್ಪ ಕರಡಿ, ಸದಸ್ಯ ಪ್ರೇಮಾನಂದ ಬಿರಾದಾರ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ಹಕಾಧಿಕಾರಿ ರಿಷಿ ಆನಂದ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಕೆಎಂಎಫ್ ಅಧ್ಯಕ್ಷ ಲಿಂಗರಾಜ ಪಾಟೀಲ, ಬಿಎಲ್ಡಿಇ ಉಪಕುಲಪತಿ ಅರುಣ್ ಇನಾಮದಾರ, ಕರ್ನಾಟಕ ರಾಜ್ಯ ಸೈಕ್ಲಿಂಕ್ ಅಸೋಷಿಯೇಷನ್ ಅಧ್ಯಕ್ಷ ರವಿ ಬಿರಾದಾರ, ಮಹಾಂತೇಶ ಬಿರಾದಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-26-527129132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.