ವಿಜಯಪುರ: ‘ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯಂತ ಅಗತ್ಯವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೂ ಮಹತ್ವದ ಪಾತ್ರವಹಿಸುತ್ತವೆ’ ಎಂದು ಬಸವನ ಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎನ್.ಬಿ.ಹೊಸಮನಿ ಹೇಳಿದರು.

ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎರಡನೇ ವಲಯದ ಅಂತರ ಮಹಾವಿದ್ಯಾಲಯಗಳ ಪುರುಷರ ಕಬ್ಬಡ್ಡಿ ಪಂದ್ಯಾವಳಿಯ ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

‘ಕ್ರೀಡೆಗಳು ತಂಡದ ಕೆಲಸ, ನಾಯಕತ್ವ ಹಾಗೂ ಶಿಸ್ತಿನಂತಹ ಗುಣಗಳನ್ನು ಬೆಳೆಸುತ್ತವೆ. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸಮರ್ಪಕ ಯೋಜನೆ ಹಾಗೂ ಒಗ್ಗಟ್ಟಿನೊಂದಿಗೆ ಆಟವಾಡಿದಾಗ ಮಾತ್ರ ಯಶಸ್ಸು ಸಾಧ್ಯವೆಂದು’ ಹೇಳಿದರು.

ಪ್ರಾಂಶುಪಾಲ ಎ.ಐ.ಹಂಜಗಿ ಮಾತನಾಡಿ, ‘ಕ್ರೀಡಾಪಟುಗಳು ಸದಾ ಕ್ರೀಡಾ ಸ್ಪೂರ್ತಿಯಿಂದ ಆಡಬೇಕು. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯುತ್ತವೆ’ ಎಂದು ತಿಳಿಸಿದರು.

ಫೈನಲ್ ಪಂದ್ಯದಲ್ಲಿ ಆತಿಥೇಯ ಸರ್ಕಾರಿ ಪದವಿ ಕಾಲೇಜು, ವಿಜಯಪುರ ಮತ್ತು ಬಂಜಾರಾ ಪದವಿ ಕಾಲೇಜು ತಂಡಗಳ ನಡುವೆ ರೋಚಕ ಪೈಪೋಟಿ ನಡೆಯಿತು.

ಸಮಬಲದ ಹೋರಾಟದ ಬಳಿಕ ಬಂಜಾರಾ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು, ಆತಿಥೇಯ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು.

ಆಹೇರಿಯ ಸಂಜಯ ಜಾಧವ, ಐ.ಕ್ಯೂ.ಎ.ಸಿ ಸಂಚಾಲಕ ಪ್ರೊ. ಆರ್.ಎಸ್.ಕುರಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಕ್ರೀಡಾ ನಿರ್ದೇಶಕಿ ರೇಣುಕಾ ಅಂಬಲಿ, ಚಿದಾನಂದ ಆನೂರ, ಸುನೀಲ ತೋಂಟಾಪೂರ, ಪ್ರೊ. ಎಂ.ಎಸ್.ಖೊದ್ನಾಪೂರ, ಪ್ರೊ. ಸುನೀಲ ಹತ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-26-883142247

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.