ಮಂಗಳವಾರ, ನವೆಂಬರ್ 19, 2019
28 °C

ಮಳೆ: ಅಭ್ಯಾಸ ಪಂದ್ಯ ರದ್ದು

Published:
Updated:

ಸೂರತ್‌: ದಕ್ಷಿಣ ಆಫ್ರಿಕಾ ಮಹಿಳಾ ತಂಡ ಹಾಗೂ ಮಂಡಳಿ ಅಧ್ಯಕ್ಷರ ಇಲೆವನ್‌ ನಡುವೆ ಶುಕ್ರವಾರ ನಡೆಯಬೇಕಿದ್ದ ಮೊದಲ ಟ್ವೆಂಟಿ–20 ಅಭ್ಯಾಸ ಪಂದ್ಯ ಮಳೆಯ ಕಾರಣ ರದ್ದಾಗಿದೆ.

ಎರಡನೇ ಅಭ್ಯಾಸ ಪಂದ್ಯ ಇಲ್ಲಿಯ ಲಾಲ್‌ಭಾಯ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಟ್ವೆಂಟಿ–20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್‌ 24ರಂದು ಆಯೋಜನೆಯಾಗಿದೆ.

ಐದು ಪಂದ್ಯಗಳ ಟ್ವೆಂಟಿ–20 ಸರಣಿಯ ಬಳಿಕ ಮೂರು ಏಕದಿನ ಪಂದ್ಯಗಳಲ್ಲಿ ತಂಡಗಳು ಹಣಾಹಣಿ ನಡೆಸಲಿವೆ. ಭಾರತ ತಂಡದ 15 ವರ್ಷದ ಶೆಫಾಲಿ ವರ್ಮಾ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಪ್ರತಿಕ್ರಿಯಿಸಿ (+)