ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಟೋಬರ್‌ 31ರಂದು ಭಾರತ ಅಥ್ಲೆಟಿಕ್ಸ್ ಫೆಡರೇಷನ್‌ ಚುನಾವಣೆ

Last Updated 17 ಅಕ್ಟೋಬರ್ 2020, 13:42 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಅಥ್ಲೆಟಿಕ್ಸ್ ಫೆಡರೇಷನ್‌ (ಎಎಫ್‌ಐ) ಪದಾಧಿಕಾರಿಗಳ ಚುನಾವಣೆ ಇದೇ ತಿಂಗಳ 31ರಂದು ನಡೆಯಲಿದೆ. ಅಂದು ಫೆಡರೇಷನ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಜಿಬಿಎಂ) ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ಎಎಫ್‌ಐಗೆ ಏಪ್ರಿಲ್‌ನಲ್ಲೇ ಚುನಾವಣೆ ನಿಗದಿಯಾಗಿತ್ತು. ಆದರೆ ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಮೇ ತಿಂಗಳಲ್ಲಿ ಆನ್‌ಲೈನ್‌ ಮೂಲಕ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಚುನಾವಣೆಗಳನ್ನು ಮತ್ತೆ ಮುಂದಕ್ಕೆ ಹಾಕಿ ಪದಾಧಿಕಾರಿಗಳ ಆಡಳಿತ ಅವಧಿಯನ್ನು ವಿಸ್ತರಿಸಲಾಗಿತ್ತು.

ಆನ್‌ಲೈನ್‌ ಮೂಲಕ ನಡೆಸದೆ, ಪದಾಧಿಕಾರಿಗಳ ಸಮ್ಮುಖದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಆ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಎಎಫ್‌ಐನ ಜಿಬಿಎಂ ಗುರುಗ್ರಾಮದಲ್ಲಿ ಎರಡು ದಿನಗಳ ಕಾಲ (ಅಕ್ಟೋಬರ್‌ 31–ನವೆಂಬರ್‌ 1) ನಡೆಯಲಿದೆ.

‘ಎಎಫ್‌ಐನ ಜಿಬಿಎಂ ಗುರುಗ್ರಾಮದಲ್ಲಿ ನಡೆಯಲಿದೆ. ನಿಯಮಾವಳಿಗಳ ಪ್ರಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಶಾಶ್ವತ ಅಂಗಸಂಸ್ಥೆಗಳಿಂದ ಇಬ್ಬರು ಪ್ರತಿನಿಧಿಗಳು ಹಾಗೂ ಇತರ ಅಂಗಸಂಸ್ಥೆಗಳ ಒಬ್ಬರು ಪ್ರತಿನಿಧಿಗಳು ಆಯ್ಕೆಯಾಗಲಿದ್ದಾರೆ‘ ಎಂದು ಎಎಫ್‌ಐ ಪ್ರಕಟಣೆ ತಿಳಿಸಿದೆ.

ಇದೇ 18ರಿಂದ 21ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. 23ರಂದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.

ಹಾಲಿ ಅಧ್ಯಕ್ಷ ಆದಿಲ್‌ ಸುಮರಿವಾಲಾ ಸತತ ಮೂರನೇ ಬಾರಿ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT