ಮಂಗಳವಾರ, ಜನವರಿ 28, 2020
19 °C

ಲಿಂಗರಾಜ ಕಾಲೇಜು ವಿದ್ಯಾರ್ಥಿಗೆ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಬೆಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಸ್ವಾಯತ್ತ ಕಾಲೇಜಿನ ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿ ಅಮರನಾಥ ಎಂ.ಡಿ. ಇತ್ತೀಚಿಗೆ ಮೂಡಬಿದಿರೆಯಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದ 400 ಮೀಟರ್ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.

ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ಆಳ್ವಾಸ್‌ ಪ್ರತಿಷ್ಠಾನದಿಂದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಅದರಲ್ಲಿ ಅಮರನಾಥ್‌ 51.8 ಸೆಕೆಂಡ್‌ಗಳಲ್ಲಿ ಗುರಿ ಪೂರೈಸಿ ಸಾಧನೆ ಮಾಡಿದ್ದಾರೆ. ಈ ಕ್ರೀಡಾಪಟು ಫೆ.22ರಿಂದ ಮಾರ್ಚ್‌ 3ರವರೆಗೆ ಭುವನೇಶ್ವರದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದರು. ಈ ವೇಳೆ, ಪ್ರಾಚಾರ್ಯ ಡಾ.ಆರ್.ಎಂ. ಪಾಟೀಲ ಹಾಗೂ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಸಿ.ರಾಮರಾವ್ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು