ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವು ಹಗರಣ: ತೀರ್ಪು ಮುಂದೂಡಿಕೆ

Last Updated 17 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಪಟ್ನಾ: ಎರಡು ದಶಕಗಳ ಹಿಂದಿನ ದುಮಕಾ ಬಹುಕೋಟಿ ಮೇವು ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಮಾಜಿ ಮುಖ್ಯಮಂತ್ರಿ ಜಗನ್ನಾಥ್‌ ಮಿಶ್ರಾ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಪ್ರಕಟಿಸಬೇಕಿದ್ದ ತೀರ್ಪನ್ನು ಮುಂದೂಡಿದೆ.

ಈ ಮೊದಲು ಶನಿವಾರ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದ ನ್ಯಾಯಮೂರ್ತಿ ಶಿವಪಾಲ್ ಸಿಂಗ್ ಅವರು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದರಿಂದಾಗಿ ಮಾರ್ಚ್ 19ರಂದು ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ₹3.13 ಕೋಟಿ ಮೊತ್ತದ ದುಮಕಾ ಪ್ರಕರಣದ ತೀರ್ಪು ಮುಂದೂಡಿಕೆ ಆಗುತ್ತಿರುವುದು ಇದು ಎರಡನೇ ಬಾರಿ.

ಆಸ್ಪತ್ರೆಗೆ ದಾಖಲು: ಲಾಲು ಪ್ರಸಾದ್ ಅವರಿಗೆ ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೃದಯವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿದ್ದು, ವೈದ್ಯರು ಇಸಿಜೆ ಮತ್ತು ಇತರೆ ಪರೀಕ್ಷೆಗಳನ್ನು ನಡೆಸಿದ್ದಾರೆ.

ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT