ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ಮೊಹಮದ್‌ ನಲಪಾಡ್‌ ನ್ಯಾಯಾಂಗ ಬಂಧನ ಮೇ 11ರವರೆಗೆ ವಿಸ್ತರಣೆ

Last Updated 28 ಏಪ್ರಿಲ್ 2018, 7:01 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಫರ್ಜಿ ಕೆಫೆಯಲ್ಲಿ ಹಲ್ಲೆ ನಡೆಸಿದ ಆರೋಪಿ ಮೊಹಮದ್‌ ನಲಪಾಡ್‌ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮೇ 11ರವರೆಗೆ ವಿಸ್ತರಿಸಿದೆ.

ಇದೇ ವೇಳೆ ಮೊಹಮದ್ ನಲಪಾಡ್‌ ಪರ ವಕೀಲರು ನಲಪಾಡ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಶನಿವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಅರ್ಜಿ ಸಲ್ಲಿಸಲಾಗಿದೆ.

'ಪ್ರಕರಣಕ್ಕೆ ಸಂಬಂಧಿಸಿದಂತೆ 60 ದಿನಗಳಾದರೂ ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿಲ್ಲ. ಆದ್ದರಿಂದ, ಸಿಆರ್‌ಪಿಸಿ ಕಲಂ 167(2)ರ ಅಡಿಯಲ್ಲಿ ಆರೋಪಿಗೆ ಕಡ್ಡಾಯ ಜಾಮೀನು ಮಂಜೂರು ಮಾಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದಕ್ಕೆ ಪ್ರತಿಯಾಗಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಂ.ಎಸ್.ಶ್ಯಾಮಸುಂದರ್, 'ದೋಷಾರೋಪಣೆ ಪಟ್ಟಿ ಸಲ್ಲಿಕೆಗೆ 90 ದಿನಗಳ ಕಾಲಾವಕಾಶ ಇದೆ. ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ತನಿಖಾಧಿಕಾರಿಗೆ ಇನ್ನೂ ಸಾಕಷ್ಟು ಸಮಯವಿದೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT