ಶನಿವಾರ, ಜುಲೈ 31, 2021
20 °C

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ ದೆಹಲಿಯಿಂದ ದುಬೈಗೆ ಸ್ಥಳಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂದಿನ ತಿಂಗಳು ಇಲ್ಲಿ ನಿಗದಿಯಾಗಿದ್ದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ಅನ್ನು ಕೋವಿಡ್‌–19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬುಧವಾರ ದುಬೈಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಭಾರತ ಬಾಕ್ಸಿಂಗ್ ಫೆಡರೇಷನ್‌, ಯುಎಇ ಫೆಡರೇಷನ್‌ನೊಂದಿಗೆ ಸಹ ಆಯೋಜಕವಾಗಿ ಉಳಿಯಲಿದೆ.

ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಮೇ 21ರಿಂದ 31ರವರೆಗೆ ಚಾಂಪಿಯನ್‌ಷಿಪ್ ನಡೆಯಬೇಕಿತ್ತು. ಆದರೆ ದೆಹಲಿಯಲ್ಲಿ ಈಗ ಪ್ರತಿದಿನ 20 ಸಾವಿರಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿವೆ.

‘ಭಾರತಕ್ಕೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧದ ಹಿನ್ನೆಲೆಯಲ್ಲಿ, ನಮ್ಮ ಫೆಡರೇಷನ್‌, ಏಷ್ಯನ್‌ ಬಾಕ್ಸಿಂಗ್ ಫೆಡರೇಷನ್‌ನೊಂದಿಗೆ (ಎಎಸ್‌ಬಿಸಿ) ಚರ್ಚಿಸಿದ್ದು ಮುಂಬರುವ ಪುರುಷ ಮತ್ತು ಮಹಿಳೆಯರ ಏಷ್ಯನ್‌ ಚಾಂಪಿಯನ್‌ಷಿಪ್‌ಗಳನ್ನು ದುಬೈಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ‘ ಎಂದು ಭಾರತ ಬಾಕ್ಸಿಂಗ್ ಫೆಡರೇಷನ್‌ (ಬಿಎಫ್‌ಐ) ಹೇಳಿದೆ.

ದುಬೈನಲ್ಲಿ ಚಾಂಪಿಯನ್‌ಷಿಪ್ ಮೇ 21ರಿಂದ ಜೂನ್ 1ರವರೆಗೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು