ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಲವ್ಲಿನಾಗೆ ₹1ಕೋಟಿ, ಡಿಎಸ್‌ಪಿ ಹುದ್ದೆ

Last Updated 12 ಆಗಸ್ಟ್ 2021, 13:19 IST
ಅಕ್ಷರ ಗಾತ್ರ

ಗುವಾಹಟಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರಿಗೆ ಅಸ್ಸಾಂ ಸರ್ಕಾರ ₹1 ಕೋಟಿ ಹಣ ಮತ್ತು ಡಿಎಸ್‌ಪಿ ಹುದ್ದೆ ನೀಡಿದೆ.

ಒಲಿಂಪಿಕ್ಸ್‌ನ ಮಹಿಳಾ ಬಾಕ್ಸಿಂಗ್‌ 69 ಕೆ.ಜಿ ವಿಭಾಗದ ಸೆಮಿಫೈನಲ್‌ ಪ್ರವೇಶಿಸುವಲ್ಲಿ ಲವ್ಲಿನಾ ಸಫಲರಾಗಿದ್ದರು. ಸೆಮಿಫೈನಲ್‌ನಲ್ಲಿ ಸೋತಿದ್ದ ಅವರು, ಫೈನಲ್‌ ಪ್ರವೇಶಿಸಲು ವಿಫಲರಾಗಿದ್ದರಾದರೂ, ಕಂಚಿನ ಪದಕವನ್ನು ಖಾತ್ರಿಪಡಿಸಿದ್ದರು.

ಲವ್ಲಿನಾ ಸಾಧನೆ ಹಿನ್ನೆಲೆಯಲ್ಲಿ ಅವರಿಗೆ ಡಿಎಸ್‌ಪಿ ಹುದ್ದೆ ನೀಡುವುದಾಗಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಗುರುವಾರ ಘೋಷಣೆ ಮಾಡಿದ್ದಾರೆ.

ಇದರ ಜೊತೆಗೆ, ಗುವಾಹಟಿಯ ರಸ್ತೆಯೊಂದಕ್ಕೆ ಲವ್ಲಿನಾ ಹೆಸರು ಇಡಲು ನಿರ್ಧರಿಸಲಾಗಿದೆ. ಆಕೆಯ ತವರೂರಾದ ಗೋಲಘಾಟ್‌ನಲ್ಲಿ ಆಕೆಯ ಹೆಸರಿನಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.

ಲವ್ಲಿನಾಗೆ ತರಬೇತಿ ನೀಡಿದ ಕೋಚ್‌ಗೆ ₹10 ಲಕ್ಷ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಶರ್ಮಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT