ಬುಧವಾರ, ಮೇ 19, 2021
22 °C

ಜಾರ್ಖಂಡ್‌ | ಜೀವನ ನಿರ್ವಹಣೆಗಾಗಿ ತರಕಾರಿ ವ್ಯಾಪಾರಕ್ಕಿಳಿದ ಅಥ್ಲೀಟ್‌!

ಪಿಟಿಐ Updated:

ಅಕ್ಷರ ಗಾತ್ರ : | |

ರಾಂಚಿ: ಬಡತನದ ಬೇಗೆಯಿಂದ ಬಳಲಿರುವ ಯುವ ಅಥ್ಲೀಟ್‌ ಗೀತಾ ಕುಮಾರಿ, ಜೀವನ ನಿರ್ವಹಣೆಗಾಗಿ ತರಕಾರಿ ವ್ಯಾಪಾರಕ್ಕೆ ಇಳಿದು ಸುದ್ದಿಯಾಗಿದ್ದಾರೆ.

ಜಾರ್ಖಂಡ್‌ ರಾಜ್ಯದ ಹಜಾರಿಬಾಗ್‌ನ ಆನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ. ವ್ಯಾಸಂಗ ಮಾಡುತ್ತಿರುವ ಗೀತಾ ಅವರು ರಾಜ್ಯಮಟ್ಟದ ನಡಿಗೆ ಸ್ಪರ್ಧೆಯಲ್ಲಿ ಎಂಟು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕಗಳನ್ನು ಜಯಿಸಿದ್ದಾರೆ. ಕೋಲ್ಕತ್ತದಲ್ಲಿ ಆಯೋಜನೆಯಾಗಿದ್ದ ಕೂಟದಲ್ಲೂ ಪಾಲ್ಗೊಂಡಿದ್ದ ಅವರು ಕಂಚಿನ ಪದಕ ಗೆದ್ದಿದ್ದರು.

ಈ ಸುದ್ದಿ ತಿಳಿದ ಕೂಡಲೇ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಅವರು ಗೀತಾ ಅವರ ನೆರವಿಗೆ ಧಾವಿಸಿದ್ದಾರೆ. ರಾಮಗಡ ಜಿಲ್ಲಾಧಿಕಾರಿ ಸಂದೀಪ್‌ ಸಿಂಗ್‌ ಅವರಿಂದ ಮಾಹಿತಿ ಪಡೆದುಕೊಂಡಿರುವ ಅವರು ಕೂಡಲೇ ಗೀತಾ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಸೂಚಿಸಿದ್ದಾರೆ.

ಸೋಮವಾರ ಗೀತಾ ಅವರ ಮನೆಗೆ ಭೇಟಿ ನೀಡಿದ್ದ ಸಂದೀಪ್,‌ 50 ಸಾವಿರ ರೂಪಾಯಿಯ ಚೆಕ್‌ ಹಸ್ತಾಂತರಿಸಿದ್ದಾರೆ. ಪ್ರತಿ ತಿಂಗಳು ಮೂರು ಸಾವಿರ ಸಹಾಯ ಧನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. ಜೊತೆಗೆ ಸಮೀಪದ ಕ್ರೀಡಾ ಕೇಂದ್ರದಲ್ಲಿ ತರಬೇತಿ ಪಡೆಯುವ ವ್ಯವಸ್ಥೆಯನ್ನೂ ಮಾಡಿಕೊಟ್ಟಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ರಾಮಗಡ ಜಿಲ್ಲೆಯಲ್ಲಿ ಹಲವು ಮಂದಿ ಪ್ರತಿಭಾನ್ವಿತ ಅಥ್ಲೀಟ್‌ಗಳಿದ್ದಾರೆ. ದೇಶಕ್ಕಾಗಿ ಪದಕ ಗೆದ್ದುಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೆ ಎಲ್ಲಾ ಬಗೆಯ ಸಹಕಾರ ನೀಡಲು ನಾವು ಬದ್ಧರಿದ್ದೇವೆ’ ಎಂದು ಸಂದೀಪ್‌ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು