ಶುಕ್ರವಾರ, ಸೆಪ್ಟೆಂಬರ್ 17, 2021
24 °C
ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ ಆರಂಭ

ಮೊದಲ ದಿನ 680 ಕ್ರೀಡಾಪಟುಗಳು ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಜ್ಯ ಮಟ್ಟದ ಹಿರಿಯರ ಹಾಗೂ 23 ವರ್ಷದೊಳಗಿನ ಮಹಿಳೆಯರ ಹಾಗೂ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಹಾಗೂ ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಅಧ್ಯಕ್ಷ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನಿಂದ ಆರಂಭವಾಗಿರುವ ಅಥ್ಲೆಟಿಕ್ಸ್‌ ಎರಡು ದಿನಗಳ ಕಾಲ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ 680 ಕ್ರೀಡಾಪುಟಗಳು ಭಾಗವಹಿಸಿದ್ದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಹೆ ಮಣಿಪಾಲ ಕುಲಪತಿ ಎಂ.ಡಿ ವೆಂಕಟೇಶ್, ಉಪ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಲ್, ಎನ್.ಇ.ಬಿ ಸ್ಪೋರ್ಟ್ಸ್ ಎಂಟರ್‌ಟೇನ್‌ಮೆಂಟ್‌ ಸಿಎಂಡಿ ನಾಗರಾಜ್ ಅಡಿಗ, ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ರಾಜವೇಲು, ರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಅಧ್ಯಕ್ಷರಾದ ಡಾ.ಕೆಂಪರಾಜ್, ಕೋಶಾಧಿಕಾರಿ ದೀಪಕ್ ರಾಮ್ ಬಾಯಾರಿ, ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಕಾರ್ಯದರ್ ಮಹೇಶ್ ಠಾಕೂರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.