ಭಾನುವಾರ, ಸೆಪ್ಟೆಂಬರ್ 19, 2021
26 °C

ಕಳಪೆ ಸಾಮರ್ಥ್ಯ ತೋರಿದರೆ ಕ್ರಮ: ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಒಲಿಂಪಿಕ್ಸ್‌ನಲ್ಲಿ ನಿರೀಕ್ಷೆಗೆ ತಕ್ಕ ಸಾಮರ್ಥ್ಯ ತೋರದ ಅಥ್ಲೀಟ್‌ಗಳು ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ’ ಎಂದು ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ಶುಕ್ರವಾರ ಎಚ್ಚರಿಸಿದೆ.

ಈಗಾಗಲೇ ಕೂಟಕ್ಕೆ ಅರ್ಹತೆ ಗಳಿಸಿರುವ ಲಾಂಗ್‌ಜಂಪ್‌ ಸ್ಪರ್ಧಿ ಎಂ.ಶ್ರೀಶಂಕರ್‌ ಹಾಗೂ 20 ಕಿ.ಮೀ.ನಡಿಗೆ ಸ್ಪರ್ಧಿ ಕೆ.ಟಿ.ಇರ್ಫಾನ್‌ ಉತ್ತಮ ಲಯದಲ್ಲಿಲ್ಲ ಎಂಬ ಮಾತುಗಳು ಕೇಳಿಬಂದಿದೆ.

‘ಇರ್ಫಾನ್‌ ಹಾಗೂ ಶ್ರೀಶಂಕರ್‌ ಒಲಿಂಪಿಕ್ಸ್‌ನಲ್ಲಿ ಉತ್ತಮ ಸಾಮರ್ಥ್ಯ ತೋರಲಿದ್ದಾರೆ ಎಂದು ಅವರ ಕೋಚ್‌ಗಳು ಭರವಸೆ ನೀಡಿದ್ದಾರೆ. ಹೀಗಾಗಿ ಕೂಟಕ್ಕೆ ಕಳುಹಿಸಲು ತೀರ್ಮಾನಿಸಿದ್ದೇವೆ. ನಿರಾಸೆ ಮೂಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಎಎಫ್‌ಐ ಅಧ್ಯಕ್ಷ ಆದಿಲ್‌ ಸುಮರಿವಾಲ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು