ಶನಿವಾರ, ಜುಲೈ 24, 2021
25 °C
ಕೋವಿಡ್ –19 ನಿಯಮಗಳನ್ನು ಸಡಿಲಗೊಳಿಸಿದ ಪ್ರಧಾನಿ

ಆಸ್ಟ್ರೇಲಿಯಾ | ಕ್ರೀಡಾಂಗಣದಲ್ಲಿ ಹತ್ತು ಸಾವಿರ ಪ್ರೇಕ್ಷಕರಿಗೆ ಅವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮರುಚಾಲನೆ ನೀಡಲು ಕೋವಿಡ್ –19 ನಿಯಂತ್ರಣ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. ಇದರಿಂದಾಗಿ ಮುಂದಿನ ತಿಂಗಳಿನಿಂದ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಕೊಡಬಹುದಾಗಿದೆ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ.

ಶುಕ್ರವಾರ ನಡೆದ ರಾಷ್ಟ್ರೀಯ ಸಚಿವ ಸಂಪುಟದ ಸಭೆಯಲ್ಲಿ ಮಾತನಾಡಿದ ಸ್ಕಾಟ್, ‘ಕ್ರೀಡಾಂಗಣಗಳಲ್ಲಿರುವ ಪ್ರೇಕ್ಷಕರ ಆಸನ ಸಾಮರ್ಥ್ಯದ ಶೇ 25ರಷ್ಟು ಮಂದಿಗೆ ಪ್ರವೇಶಾವಕಾಶ ನೀಡಲು ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುತ್ತಿವೆ. ಉದಾಹರಣೆಗೆ ಕ್ರೀಡಾಂಗಣದಲ್ಲಿ 40 ಸಾವಿರ ಆಸನ ಸಾಮರ್ಥ್ಯವಿದ್ದರೆ ಹತ್ತು ಸಾವಿರ ಮಂದಿಗೆ ಅವಕಾಶ ಸಿಗಬಹುದು. ಒಂದು ಸೀಟುಗಳಿಲ್ಲದ ಮೈದಾನಗಳಲ್ಲಿ ಇದಕ್ಕಿಂತ ಹೆಚ್ಚು ಜನರಿಗೆ ಅವಕಾಶ ಕೊಡಬಹುದು’  ಎಂದರು..

‘ಹೆಚ್ಚು ಸಾಮರ್ಥ್ಯವಿರುವ ಕ್ರೀಡಾಂಗಣಗಳಿಗೆ ಹೆಚ್ಚೆಚ್ಚು ಪ್ರೇಕ್ಷಕರಿಗೆ ಅವಕಾಶ ದೊರೆಯುತ್ತದೆ. ಆದರೆ, ಇದರಿಂದಾಗಿ ಸಾಮಾಜಿಕ ಅಂತರ ಮತ್ತಿತರ ನಿಯಮಗಳನ್ನು ಪಾಲಿಸುವುದು ಸವಾಲಿನ ಕೆಲಸವಾಗಲಿದೆ. ಇಂತಹ ಸಂದರ್ಭದಲ್ಲಿ ಸಮುದಾಯಕ್ಕೆ ಸೋಂಕು ಪ್ರಸರಣದ ಅಪಾಯವಿರುತ್ತದೆ. ಆದರೂ ಎಚ್ಚರಿಕೆಯಿಂದ ನಿರ್ವಹಿಸುವ ವಿಶ್ವಾಸವಿದೆ. ಈ ನಿರ್ಧಾರವನ್ನು ಬಹಳಷ್ಟು ಜನರು ಸ್ವಾಗತಿಸುತ್ತಾರೆಂಬ ಭರವಸೆ ಇದೆ’  ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ ಪಕ್ಕದ ನ್ಯೂಜಿಲೆಂಡ್‌ ಈಗಾಗಲೇ ಕೋವಿಡ್‌ ಮುಕ್ತವಾಗಿದೆ. ಆಸ್ಟ್ರೇಲಿಯಾದಲ್ಲಿಯೂ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದ್ದರಿಂದ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಈ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮರುಚಾಲನೆ ನೀಡಲು ಯೋಚಿಸಲಾಗುತ್ತಿದೆ. ಅಕ್ಟೋಬರ್‌–ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಆಯೋಜನೆಗೊಂಡಿದೆ. ಈ ಟೂರ್ನಿಯನ್ನು ನಡೆಸುವ ಕುರಿತು ಮುಂದಿನ ತಿಂಗಳು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಿರ್ಧಾರ ಕೈಗೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು