ಸಿಡ್ನಿ: ಆಸ್ಟ್ರೇಲಿಯಾದ ಈಜುಪಟು ಕೈಲಿ ಮೆಕಿಯೊನ್ ಅವರು ಮಹಿಳೆಯರ 200 ಮೀಟರ್ಸ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶುಕ್ರವಾರ ವಿಶ್ವದಾಖಲೆ ಬರೆದಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಮೂರು ಚಿನ್ನದ ಪದಕ ಗೆದ್ದಿರುವ ಮೆಕಿಯೊನ್, ಸಿಡ್ನಿ ಒಲಿಂಪಿಕ್ ಪಾರ್ಕ್‌ನಲ್ಲಿ ನಡೆದ ಎನ್‌ಎಸ್‌ಡಬ್ಲ್ಯು ಸ್ಟೇಟ್ ಓಪನ್ ಚಾಂಪಿಯನ್‌ಷಿಪ್‌ನಲ್ಲಿ 2 ನಿಮಿಷ 3.15 ಸೆಕೆಂಡುಗಳಲ್ಲಿ ಅವರು ಗುರಿ ತಲುಪಿದರು. ಇದರೊಂದಿಗೆ 2019ರಲ್ಲಿ ಅಮೆರಿಕದ ರೇಗನ್ ಸ್ಮಿತ್ ಅವರು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು (2 ನಿ. 3.25 ಸೆ.) ಮೀರಿದರು. 100 ಮೀ. ಬ್ಯಾಕ್‌ಸ್ಟ್ರೋಕ್ ದಾಖಲೆಯೂ 21 ವರ್ಷದ ಮೆಕಿಯೊನ್ ಅವರ ಹೆಸರಿನಲ್ಲೇ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.