ಶನಿವಾರ, ಏಪ್ರಿಲ್ 17, 2021
33 °C

ಜಾವೆಲಿನ್ ಥ್ರೋ: ನೀರಜ್ ಚೋಪ್ರಾಗೆ ಚಿನ್ನದ ಪದಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟಿಯಾಲ: ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್ ಚೋಪ್ರಾ, ಇಲ್ಲಿ ನಡೆಯುತ್ತಿರುವ 24ನೇ ರಾಷ್ಟ್ರೀಯ ಫೆಡರೇಷನ್ ಕಪ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬುಧವಾರ ಚಿನ್ನದ ಪದಕ ಗೆದ್ದರು.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲಿರುವ ಸಂಭವನೀಯ ಅಥ್ಲೀಟ್ ಆಗಿರುವ ನೀರಜ್ ತಮ್ಮದೇ ಹಳೆಯ ದಾಖಲೆಯನ್ನು ಉತ್ತಮಪಡಿಸಿಕೊಂಡರು. 87.80 ಮೀಟರ್ಸ್ ದೂರ ಜಾವೆಲಿನ್ ಎಸೆದ ಅವರು, ತಮ್ಮದೇ ಹಳೆಯ ದಾಖಲೆಯನ್ನು ಮೀರಿ ನಿಂತರು.

ಪುರುಷರ ಮೂರು ಸಾವಿರ ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಅವಿನಾಶ್ ಸಬ್ಳೆ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.  8ನಿಮಿಷ, 20.20 ಸೆಕೆಂಡುಗಳಲ್ಲಿ ಗುರಿ ತಲುಪಿ ತಮ್ಮದೇ ಹಳೆಯ ದಾಖಲೆಯನ್ನು ಮೀರಿದರು.

ಶಾಟ್‌ಪಟ್‌ನಲ್ಲಿ ತಜಿಂದರ್ ಪಾಲ್ ತೂರ್  20.58 ಮೀಟರ್ಸ್ ದೂರ ಎಸೆದು ಚಿನ್ನದ ಪದಕ ಜಯಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು