ಆಳ್ವಾಸ್‌ಗೆ ಪ್ರಶಸ್ತಿ ‘ಡಬಲ್’

ಬೆಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪುರುಷರ ಮತ್ತು ಮಹಿಳಾ ತಂಡದವರು ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಸಹಯೋಗದ ರಾಜ್ಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.
ಆಳ್ವಾಸ್ ವಿದ್ಯಾಸಿರಿ ಕ್ಯಾಂಪಸ್‌ನಲ್ಲಿ ಭಾನುವಾರ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ 35–33, 35–27 ನೇರ ಸೆಟ್‌ಗಳಿಂದ ಬೆಂಗಳೂರಿನ ವಿಜಯನಗರ ಕ್ಲಬ್ ತಂಡವನ್ನು ಪರಾಭವಗೊಳಿಸಿತು.
ಕೆನರಾ ಬ್ಯಾಂಕ್ ತಂಡ ಮೂರನೇ ಸ್ಥಾನ ಪಡೆಯಿತು.
ಮಹಿಳಾ ವಿಭಾಗದ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಆಳ್ವಾಸ್ ‘ಎ’ ತಂಡ 35–18, 35–16 ನೇರ ಸೆಟ್‌ಗಳಿಂದ ಆಳ್ವಾಸ್ ‘ಬಿ’ ತಂಡವನ್ನು ಸೋಲಿಸಿತು.
ಮಂಗಳೂರು ಜಿಲ್ಲಾ ತಂಡ ಮೂರನೇ ಸ್ಥಾನ ತನ್ನದಾಗಿಸಿಕೊಂಡಿತು.
ಆಳ್ವಾಸ್ ತಂಡದ ಯಶವಂತ್ ಮತ್ತು ಗಾಯತ್ರಿ ಅವರು ಟೂರ್ನಿಯ ಶ್ರೇಷ್ಠ ಆಟಗಾರ ಮತ್ತು ಆಟಗಾರ್ತಿ ಗೌರವ ಪಡೆದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.