ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ ಬ್ಯಾಡ್ಮಿಂಟನ್‌: ಆಳ್ವಾಸ್‌ ತಂಡಗಳಿಗೆ ಪ್ರಶಸ್ತಿ

Last Updated 16 ಅಕ್ಟೋಬರ್ 2018, 15:11 IST
ಅಕ್ಷರ ಗಾತ್ರ

ಬೆಂಗಳೂರು: ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡದವರು ಪದವಿಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಮತ್ತು ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಇದರೊಂದಿಗೆ ಆಂಧ್ರಪ್ರದೇಶದಲ್ಲಿ ಆಯೋಜನೆಯಾಗಿರುವ ರಾಷ್ಟ್ರಮಟ್ಟದ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಆಳ್ವಾಸ್‌ ತಂಡದವರು ಸತತ 14ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡು ದಾಖಲೆ ಬರೆದಿದ್ದಾರೆ.

ಬಾಲಕರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್‌ ತಂಡ 35–24, 35–21ರ ನೇರ ಸೆಟ್‌ಗಳಿಂದ ದಾವಣಗೆರೆ ಜಿಲ್ಲೆ ಹರಪನಹಳ್ಳಿಯ ಎಸ್‌.ಯು.ಜೆ.ಎಂ ಕಾಲೇಜು ತಂಡದ ವಿರುದ್ಧ ಗೆದ್ದಿತು.

ಇದಕ್ಕೂ ಮೊದಲು ನಡೆದಿದ್ದ ಸೆಮಿಫೈನಲ್‌ನಲ್ಲಿ ಆಳ್ವಾಸ್‌ ಕಾಲೇಜು 35–31, 35–26ರ ನೇರ ಸೆಟ್‌ಗಳಿಂದ ಉಡುಪಿ ಜಿಲ್ಲೆಯ ಭುವನೇಂದ್ರ ಕಾಲೇಜು ತಂಡವನ್ನು ಪರಾಭವಗೊಳಿಸಿತ್ತು.

ಬಾಲಕಿಯರ ವಿಭಾಗದ ಪ್ರಶಸ್ತಿ ಸುತ್ತಿನ ಪೈಪೋಟಿಯಲ್ಲಿ ಆಳ್ವಾಸ್‌ ತಂಡ 35–14, 35–7ರಲ್ಲಿ ತುಮಕೂರಿನ ಎಂಪ್ರೆಸ್‌ ಮಹಿಳಾ ಕಾಲೇಜು ತಂಡವನ್ನು ಸೋಲಿಸಿತು.

ನಾಲ್ಕರ ಘಟ್ಟದ ಪೈಪೋಟಿಯಲ್ಲಿ ಆಳ್ವಾಸ್‌ 35–16, 35–16ರಲ್ಲಿ ಹಾಸನದ ಸರ್ಕಾರಿ ಕಾಲೇಜಿನ ಎದುರೂ, ಎಂಪ್ರೆಸ್‌ 35–31, 32–35, 35–29ರಲ್ಲಿ ಕೆ.ಆರ್‌.ಪೇಟೆಯ ಸರ್ಕಾರಿ ಜೂನಿಯರ್‌ ಕಾಲೇಜಿನ ವಿರುದ್ಧವೂ ಗೆದ್ದಿದ್ದವು.

ಚಾಂಪಿಯನ್‌ಷಿಪ್‌ನಲ್ಲಿ ಒಟ್ಟು 64 ತಂಡಗಳು ಪಾಲ್ಗೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT