ಶನಿವಾರ, ಮಾರ್ಚ್ 28, 2020
19 °C

ಬ್ಯಾಡ್ಮಿಂಟನ್‌: ಕೃಷ್ಣ ಪ್ರಸಾದ್‌–ಪ್ರಣವ್‌ಗೆ ನಿರಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾರ್ಸಿಲೋನಾ: ಭಾರತದ ಪ್ರಣವ್‌ ಜೆರಿ ಚೋಪ್ರಾ ಮತ್ತು ಕೃಷ್ಣ ಪ್ರಸಾದ್‌ ಗರಗ ಅವರು ಬಾರ್ಸಿಲೋನಾ ಸ್ಪೇನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಮೊದಲ ದಿನವೇ ನಿರಾಸೆ ಕಂಡಿದ್ದಾರೆ.

ಮಂಗಳವಾರ ನಡೆದ ಪುರುಷರ ಡಬಲ್ಸ್‌ ವಿಭಾಗದ ಆರಂಭಿಕ ಸುತ್ತಿನ ಹಣಾಹಣಿಯಲ್ಲಿ ಪ್ರಣವ್‌ ಮತ್ತು ಕೃಷ್ಣ ಪ್ರಸಾದ್‌ 21–19, 16–21, 7–21ರಲ್ಲಿ ಇಂಗ್ಲೆಂಡ್‌ನ ಬೆನ್‌ ಲೇನ್‌ ಮತ್ತು ಸೀನ್‌ ವೆಂಡಿ ವಿರುದ್ಧ ಪರಾಭವಗೊಂಡರು. ಈ ಹೋರಾಟ 58 ನಿಮಿಷಗಳಲ್ಲಿ ಕೊನೆಗೊಂಡಿತು.

ಜಿದ್ದಾಜಿದ್ದಿನ ಪೈಪೋಟಿ ಕಂಡುಬಂದ ಮೊದಲ ಗೇಮ್‌ನಲ್ಲಿ ಎದುರಾಳಿಗಳ ಸವಾಲು ಮೀರಿನಿಂತ ಪ್ರಣವ್‌ ಮತ್ತು ಕೃಷ್ಣ ಪ್ರಸಾದ್‌, ಎರಡನೇ ಗೇಮ್‌ನಲ್ಲಿ ದಿಟ್ಟ ಆಟ ಆಡಿದರು. ನಿರ್ಣಾಯಕ ಮೂರನೇ ಗೇಮ್‌ನಲ್ಲಿ ಭಾರತದ ಜೋಡಿ ಸಂಪೂರ್ಣವಾಗಿ ಮಂಕಾಯಿತು.

ಬುಧವಾರ ನಡೆಯುವ ಸಿಂಗಲ್ಸ್‌ ಪಂದ್ಯಗಳಲ್ಲಿ ಸೈನಾ ನೆಹ್ವಾಲ್‌, ಕಿದಂಬಿ ಶ್ರೀಕಾಂತ್‌, ಎಚ್‌.ಎಸ್‌.ಪ್ರಣಯ್‌, ಪರುಪಳ್ಳಿ ಕಶ್ಯಪ್‌, ಅಜಯ್‌ ಜಯರಾಮ್‌ ಮತ್ತು ಸಮೀರ್‌ ವರ್ಮಾ ಅವರು ಕಣಕ್ಕಿಳಿಯಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು