ಮಂಗಳವಾರ, ಏಪ್ರಿಲ್ 7, 2020
19 °C

ಆಸ್ಪತ್ರೆಯಾಗಲಿದೆ ಬರ್ಸಾಪರ ಕ್ರೀಡಾಂಗಣ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ (ಪಿಟಿಐ): ಇಲ್ಲಿನ ಬರ್ಸಾಪರ ಕ್ರಿಕೆಟ್‌ ಮೈದಾನವು ಈಗ ತಾತ್ಕಾಲಿಕ ಆಸ್ಪತ್ರೆಯಾಗಿ ಪರಿವರ್ತನೆಯಾಗಲಿದೆ.

ಕೊರೊನಾ ಮಹಾಮಾರಿಯ ವಿರುದ್ಧ ರಾಜ್ಯ ಸರ್ಕಾರ ಸಾರಿಸುವ ಸಮರಕ್ಕೆ ಅಸ್ಸಾಂ ಕ್ರಿಕೆಟ್‌ ಸಂಸ್ಥೆಯು ಕೈ ಜೋಡಿಸಲು ಮುಂದಾಗಿದೆ.

‘ಕೊರೊನಾ ವೈರಾಣುವಿನ ಉಪಟಳದಿಂದಾಗಿ ರಾಜ್ಯದಲ್ಲಿ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ನೆರವಾಗಬೇಕಿರುವುದು ನಮ್ಮ ಕರ್ತವ್ಯ. ಹೀಗಾಗಿ ಕ್ರೀಡಾಂಗಣದಲ್ಲಿ ತಾತ್ಕಾಲಿಕ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಅವಕಾಶ ನೀಡಿದ್ದೇವೆ’ ಎಂದು ಅಸ್ಸಾಂ ಕ್ರಿಕೆಟ್‌ ಸಂಸ್ಥೆಯ ಕಾರ್ಯದರ್ಶಿ ದೇವಜಿತ್‌ ಸೈಕಿಯಾ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು