ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಸಿ: ಪ್ರಶ್ನೆ ಪತ್ರಿಕೆ ಸೋರಿಕೆ ಸಿಬಿಐ ತನಿಖೆ

Last Updated 5 ಮಾರ್ಚ್ 2018, 19:39 IST
ಅಕ್ಷರ ಗಾತ್ರ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಕಳೆದ ತಿಂಗಳು ನಡೆಸಿದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಸೋಮವಾರ ತಿಳಿಸಿದರು.

ವಿವಿಧ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 17 ರಿಂದ 22 ರವರೆಗೆ ಕಂಬೈನ್ಡ್ ಗ್ರಾಜ್ಯುಯೇಟ್ ಲೆವೆಲ್ (ಎರಡನೇ ಹಂತ) ಪರೀಕ್ಷೆಗಳನ್ನು ಎಸ್‌ಎಸ್‌ಸಿ ನಡೆಸಿತ್ತು.

ಈ ಮಧ್ಯೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದ ಕಾರಣ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT