ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ ಬಾಲ್ ಆಟಗಾರ ಎಸ್‌.ಎ. ರಂಗದೇವ್ ನಿಧನ

Last Updated 23 ಅಕ್ಟೋಬರ್ 2018, 16:56 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ಬ್ಯಾಸ್ಕೆಟ್‌ ಬಾಲ್ ಆಟಗಾರ ಎಸ್‌.ಎ. ರಂಗದೇವ್ (67) ಅವರು ಸೋಮವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

1976–80ರ ಅವಧಿಯಲ್ಲಿ ರಂಗದೇವ್ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದರು. 1980ರಲ್ಲಿ ಮಾಸ್ಕೋ ದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಅವರು ಭಾರತ ತಂಡದ ಕಾಯ್ದಿಟ್ಟ ಆಟಗಾರರಲ್ಲಿ ಇದ್ದರು. ಬೆಂಗಳೂರಿನ ಎಚ್‌ಎಎಲ್ ತಂಡದಲ್ಲಿ ಆಡುತ್ತಿದ್ದರು. ಕರ್ನಾಟಕ ರಾಜ್ಯ ತಂಡಕ್ಕೆ ಎರಡು ದಶಕಗಳ ಕಾಲ ಆಡಿದ್ದರು. ರಾಜ್ಯ ತಂಡದ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಸಬ್‌ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT