ಸೋಮವಾರ, ಜನವರಿ 17, 2022
21 °C
ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹಾಕಿ ಚಾಂಪಿಯನ್‌ಷಿಪ್‌

ಬೆಂಗಳೂರು ನಗರ ವಿವಿ ಚಾಂಪಿಯನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಂತಿಮ ಪಂದ್ಯದಲ್ಲೂ ಅಮೋಘ ಆಟ ಮುಂದುವರಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯ ತಂಡ ಶುಕ್ರವಾರ ಕೊನೆಗೊಂಡ ದಕ್ಷಿಣ ವಲಯ ಅಂತರ ವಿವಿ ಹಾಕಿ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡಿತು.

ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಸೆಮಿಫೈನಲ್ ಸೂಪರ್ ಲೀಗ್ ಪಂದ್ಯದಲ್ಲಿ ಬೆಂಗಳೂರು ನಗರ ವಿವಿ 3–1ರಲ್ಲಿ ಬೆಂಗಳೂರು ವಿವಿಯನ್ನು ಸೋಲಿಸಿತು. ಈ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಆತಿಥೇಯ ತಂಡ ರನ್ನರ್ ಅಪ್‌ ಪ್ರಶಸ್ತಿಗೆ ಸಮಾಧಾನಪಟ್ಟುಕೊಂಡಿತು.

ತಿರುನಲ್ವೇಲಿಯ ಮನೋನ್ಮಣಿಯಂ ಸುಂದರರ್ ವಿವಿ ಮೂರನೇ ಸ್ಥಾನ ಮತ್ತು ಚೆನ್ನೈನ ಎಸ್‌.ಆರ್‌.ಎಂ ವಿವಿ ನಾಲ್ಕನೇ ಸ್ಥಾನ ಗಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.