ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಜಿಲ್ಲಾ ರೋಡ್ ಸೈಕ್ಲಿಂಗ್‌ ಚಾಂಪಿಯನ್‌ಷಿಪ್ 3ರಂದು

Last Updated 25 ಸೆಪ್ಟೆಂಬರ್ 2021, 22:23 IST
ಅಕ್ಷರ ಗಾತ್ರ

ಬೆಂಗಳೂರು: ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಆಶ್ರಯದಲ್ಲಿ ಬೆಂಗಳೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಸಂಸ್ಥೆ ಆಯೋಜಿಸಿರುವ ಜಿಲ್ಲಾ ಮಟ್ಟದ ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್ ಆಕ್ಟೋಬರ್ ಮೂರರಂದು ನಡೆಯಲಿದೆ.

14, 16 ಮತ್ತು 18 ವರ್ಷದೊಳಗಿನ ಬಾಲಕ-ಬಾಲಕಿಯರಿಗೆ, 23 ವರ್ಷದೊಳಗಿನ ಪುರುಷರಿಗೆ ಮತ್ತು ಮುಕ್ತ ವಿಭಾಗದಲ್ಲಿ ಪುರುಷ ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆಗಳು ನಡೆಯಲಿವೆ. ಪ್ರತಿ ವಿಭಾಗಕ್ಕೂ ಟೈಂ ಟ್ರಯಲ್‌ ಸ್ಪರ್ಧೆ ನಿಗದಿ ಮಾಡಲಾಗಿದೆ.

ವಿಜಯಪುರದಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ಗೆ ಜಿಲ್ಲಾ ತಂಡದ ಆಯ್ಕೆ ಈ ಚಾಂಪಿಯನ್‌ಷಿಪ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಮೂರರಂದು ಬೆಳಿಗ್ಗೆ ಆರು ಗಂಟೆಗೆ ನೆಲಮಂಗಲ-ಹಾಸನ ಹೆದ್ದಾರಿಯಲ್ಲಿ, ನಿಗದಿ ಮಾಡಿರುವ ಸ್ಥಳದಲ್ಲಿ ಹಾಜರಿರಬೇಕು. ಪಾಲ್ಗೊಳ್ಳುವವರು ಎರಡು ಬ್ರೇಕ್‌ ಹೊಂದಿರುವ ಸೈಕಲ್‌ ಹೊಂದಿರಬೇಕು. ಹೆಲ್ಮೆಟ್‌ ಧರಿಸುವುದು ಕಡ್ಡಾಯ.

ಮಾಹಿತಿಗೆ ಸಂಸ್ಥೆಯ ಗೌರವ ಕಾರ್ಯದರ್ಶಿ ಚಿಕ್ಕರಂಗಸ್ವಾಮಿ (9844385510/9632830273) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT