ಶುಕ್ರವಾರ, ಫೆಬ್ರವರಿ 28, 2020
19 °C

ಪಿಬಿಎಲ್‌: ಸೆಮಿಗೆ ಬೆಂಗಳೂರು

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೈ ಜು ಯಿಂಗ್‌ ಮತ್ತು ಬ್ರೈಸ್‌ ಲೆವರ್ಡೆಜ್‌ ಅವರ ಅಮೋಘ ಆಟದ ನೆರವಿನಿಂದ ಬೆಂಗಳೂರು ರ‍್ಯಾಪ್ಟರ್ಸ್‌ ತಂಡ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌ (ಪಿಬಿಎಲ್‌) ಐದನೇ ಆವೃತ್ತಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದೆ.

ಗುರುವಾರ ನಡೆದ ‘ಮಾಡು ಇಲ್ಲವೇ ಮಡಿ’ ಹೋರಾಟದಲ್ಲಿ ಹಾಲಿ ಚಾಂಪಿಯನ್‌ ರ‍್ಯಾಪ್ಟರ್ಸ್‌ 5–0ರಲ್ಲಿ ಅವಧ್‌ ವಾರಿಯರ್ಸ್‌ ತಂಡವನ್ನು ಮಣಿಸಿತು.

ಪುರುಷರ ಸಿಂಗಲ್ಸ್‌ ವಿಭಾಗದ ‘ಟ್ರಂಪ್‌’ ಪಂದ್ಯದಲ್ಲಿ ಲೆವರ್ಡೆಜ್‌ 15–9, 15–9 ನೇರ ಗೇಮ್‌ಗಳಿಂದ ಅಜಯ್‌ ಜಯರಾಮ್‌ ಅವರನ್ನು ಸೋಲಿಸಿದರು.

ಮಹಿಳಾ ಸಿಂಗಲ್ಸ್‌ ಪಂದ್ಯದಲ್ಲಿ ತೈ ಜು ಯಿಂಗ್‌ 15–12, 15–12ರಲ್ಲಿ ಬೀವೆನ್‌ ಜಾಂಗ್‌ ವಿರುದ್ಧ ಗೆದ್ದರು.

ಶನಿವಾರ ನಡೆಯುವ ಸೆಮಿಫೈನಲ್‌ನಲ್ಲಿ ರ‍್ಯಾಪ್ಟರ್ಸ್‌ ತಂಡ ‍ಪುಣೆ 7 ಏಸಸ್‌ ವಿರುದ್ಧ ಸೆಣಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)