ಭಾನುವಾರ, ಜುಲೈ 3, 2022
23 °C

ಸೆಪ್ಟೆಂಬರ್‌ನಲ್ಲಿ ವಿಶ್ವ 10ಕೆ ಓಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ ಆಶ್ರಯದ ವಿಶ್ವ 10ಕೆ ಓಟದ ಸ್ಪರ್ಧೆಯ 13ನೇ ಆವೃತ್ತಿಯನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಸ್ಪರ್ಧೆಯ ಸಂಘಟಕರು ಶುಕ್ರವಾರ ಈ ವಿಷಯವನ್ನು ತಿಳಿಸಿದ್ದಾರೆ.

‘ಈ ಬಾರಿಯ ಸ್ಪರ್ಧೆಯನ್ನು ಮೇ 17ರಂದು ನಡೆಸಲು ತೀರ್ಮಾನಿಸಲಾಗಿತ್ತು. ಕೊರೊನಾ ಬಿಕ್ಕಟ್ಟಿನಿಂದಾಗಿ ಇದನ್ನು ಸೆಪ್ಟೆಂಬರ್‌ 13ಕ್ಕೆ ಮುಂದೂಡಲಾಗಿದೆ. ಜುಲೈ ಎರಡರಿಂದ ಆನ್‌ಲೈನ್‌ ನೋಂದಣಿ ಆರಂಭವಾಗಲಿದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘13ನೇ ಆವೃತ್ತಿಯ ರೇಸ್‌ ಹಿಂದೆಂದಿಗಿಂತಲೂ ಹೆಚ್ಚು ಸ್ಪರ್ಧಾತ್ಮಕವಾಗಿರಲಿದೆ. ಈಗಾಗಲೇ ನೋಂದಣಿ ಮಾಡಿದವರು ಸೆಪ್ಟೆಂಬರ್‌ನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಲಿದ್ದಾರೆ. ಅವರಿಂದ ಹೆಚ್ಚುವರಿಯಾಗಿ ಯಾವುದೇ ಶುಲ್ಕ ಪಡೆಯುವುದಿಲ್ಲ’ ಎಂದು ರೇಸ್‌ನ ನಿರ್ದೇಶಕ ಹ್ಯೂ ಜೋನ್ಸ್‌ ನುಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು