ಶನಿವಾರ, ಮೇ 15, 2021
25 °C

ಬಿಎಫ್‌ಐ ಕಾರ್ಯನಿರ್ವಾಹಕ ನಿರ್ದೇಶಕ ಸಚೇತಿ ಕೋವಿಡ್‌ನಿಂದ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ನಿಂದ ಬಳಲುತ್ತಿದ್ದ, ಭಾರತ ಬಾಕ್ಸಿಂಗ್‌ ಫೆಡರೇಷನ್‌ನ (ಬಿಎಫ್‌ಐ) ಕಾರ್ಯನಿರ್ವಾಹಕ ನಿರ್ದೇಶಕ ಆರ್‌.ಕೆ.ಸಚೇತಿ (56) ಮಂಗಳವಾರ ನಿಧನರಾದರು.

ಕಳೆದ ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಕೂಡ ಅಳವಡಿಸಲಾಗಿತ್ತು.

‘ಫೆಡರೇಷನ್‌ನ ಕಾರ್ಯನಿರ್ವಾಹಕ ನಿರ್ದೇಶಕ ಆರ್‌.ಕೆ.ಸಚೇತಿ ನಿಧನರಾದರೆಂದು ತಿಳಿಸಲು ಬಹಳ ವೇದನೆಯಾಗುತ್ತದೆ. ಮಂಗಳವಾರ ಬೆಳಿಗ್ಗೆ ಅವರು ಸಾವನ್ನಪ್ಪಿದ್ದು, ಕ್ರೀಡಾ ಜಗತ್ತಿನಲ್ಲಿ ದೊಡ್ಡ ನಿರ್ವಾತ ಸೃಷ್ಟಿಯಾಗಿದೆ‘ ಎಂದು ಬಿಎಫ್‌ಐ ಪ್ರಕಟಣೆಯಲ್ಲಿ ತಿಳಿಸಿದೆ.

‘ಸಚೇತಿ ಅವರು ರಾಷ್ಟ್ರೀಯ ಫೆಡರೇಷನ್‌ನ ಜೀವ ಮತ್ತು ಆತ್ಮ ಆಗಿದ್ದರು‘ ಎಂದು ಬಿಎಫ್‌ಐ ಅಧ್ಯಕ್ಷ ಅಜಯ್ ಸಿಂಗ್ ಕಂಬನಿ ಮಿಡಿದಿದ್ದಾರೆ.

ಸಚೇತಿ ಅವರು 2016ರಲ್ಲಿ ಮೊದಲ ಬಾರಿ ಬಿಎಫ್‌ಐಗೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆಯ್ಕೆಯಾದರು. ಈ ವರ್ಷದ ಆರಂಭದಲ್ಲಿ ಅಜಯ್ ಸಿಂಗ್ ಅವರು ಫೆಡರೇಷನ್‌ಗೆ ಅಧ್ಯಕ್ಷರಾಗಿ ಮರು ಆಯ್ಕೆಯಾದ ಬಳಿಕ ಸಚೇತಿ ಕೂಡ ತಮ್ಮ ಹುದ್ದೆ ಉಳಿಸಿಕೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು