ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾಲಿಂಪಿಕ್ಸ್‌‌: ಭಾರತಕ್ಕೆ ಮೊದಲ ಪದಕ; ಐತಿಹಾಸಿಕ ಬೆಳ್ಳಿ ಗೆದ್ದ ಭಾವಿನಾ

Last Updated 29 ಆಗಸ್ಟ್ 2021, 4:28 IST
ಅಕ್ಷರ ಗಾತ್ರ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಭಾವಿನಾಬೆನ್ ಪಟೇಲ್, ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಈ ಮೂಲಕ ನೂತನ ಇತಿಹಾಸ ರಚಿಸಿರುವ ಭಾವಿನಾ, ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಪ್ಯಾರಾ ಕ್ರೀಡಾಪಟು ಎನಿಸಿದ್ದಾರೆ.

ಹಾಗೆಯೇ ಪ್ಯಾರಾಲಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಎರಡನೇ ಮಹಿಳಾ ಪ್ಯಾರಾ ಕ್ರೀಡಾಪಟು ಎಂಬ ಹಿರಿಮೆಗೆ ಭಾಜನರಾಗಿದ್ದಾರೆ. ಐದು ವರ್ಷಗಳ ಹಿಂದೆ ದೀಪಾ ಮಲಿಕ್, ಪ್ಯಾರಾಂಲಿಪಿಕ್ಸ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾ ಕ್ರೀಡಾಪಟು ಎನಿಸಿದ್ದರು.

ಇದರೊಂದಿಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಪದಕದ ಖಾತೆಯನ್ನು ತೆರೆದುಕೊಂಡಿದೆ.

34 ವರ್ಷದ ಭಾವಿನಾ ಬೆನ್‌, ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್ ಹಣಾಹಣಿಯಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜೌ ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. 19 ನಿಮಿಷಗಳ ಹೋರಾಟದ ಅಂತ್ಯದಲ್ಲಿ ಚೀನಾದ ಪ್ರಬಲ ಪ್ರತಿಸ್ಪರ್ಧಿ ವಿರುದ್ಧ ಸೋಲು ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT