ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕ್ಸರ್‌ ದುರ್ಯೋಧನ ಸಿಂಗ್‌ ನೇಗಿಗೆ ಕೋವಿಡ್‌-19 ದೃಢ

Last Updated 29 ನವೆಂಬರ್ 2020, 13:34 IST
ಅಕ್ಷರ ಗಾತ್ರ

ನವದೆಹಲಿ: ಬಾಕ್ಸಿಂಗ್ ಪಟು ದುರ್ಯೋಧನ ಸಿಂಗ್‌ ನೇಗಿ ಅವರಲ್ಲಿ ಕೋವಿಡ್‌–19 ಇರುವುದು ದೃಢಪಟ್ಟಿದೆ. ಸೋಂಕಿನ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌) ಭಾನುವಾರ ಹೇಳಿದೆ.

ಮಾಜಿ ರಾಷ್ಟ್ರೀಯ ಚಾಂಪಿಯನ್‌ ಆಗಿರುವ ದುರ್ಯೋಧನ, ದೀಪಾವಳಿ ಹಬ್ಬ ಮುಗಿಸಿಕೊಂಡು ಪಟಿಯಾಲದಲ್ಲಿರುವ ತರಬೇತಿ ಶಿಬಿರಕ್ಕೆ ಮರಳಿದ್ದರು. ಕ್ವಾರಂಟೈನ್‌ನಲ್ಲಿದ್ದ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಪತ್ತೆಯಾಗಿದೆ.

69 ಕೆಜಿ ವೆಲ್ಟರ್‌ವೇಟ್‌ ವಿಭಾಗದಲ್ಲಿ ಸ್ಫರ್ಧಿಸುವ ನೇಗಿ, ಹಲವು ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಹೋದ ವರ್ಷ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲೂ ಅವರು ಕಣಕ್ಕಿಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT