ಸೋಮವಾರ, ಸೆಪ್ಟೆಂಬರ್ 26, 2022
24 °C

Commonwealth Games: ಬಾಕ್ಸರ್ ಅಮಿತ್ ಪಂಘಲ್, ನೀತೂ ಘಂಘಸ್‌ಗೆ ಚಿನ್ನ

ಪಿಟಿಐ Updated:

ಅಕ್ಷರ ಗಾತ್ರ : | |

ಬರ್ಮಿಂಗ್‌ಹ್ಯಾಂ: ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 48 ಕೆ.ಜಿ. ವಿಭಾಗದ ಬಾಕ್ಸಿಂಗ್‌ನಲ್ಲಿ ನೀತೂ ಘಂಘಸ್ ಹಾಗೂ ಪುರುಷರ 51 ಕೆ.ಜಿ. ವಿಭಾಗದಲ್ಲಿ ಅಮಿತ್ ಪಂಘಲ್ ಅವರು ಭಾನುವಾರ ಚಿನ್ನದ ಪದಕ ಜಯಿಸಿದ್ದಾರೆ.

ಕಳೆದ ಆವೃತ್ತಿಯಲ್ಲಿ ಬೆಳ್ಳಿಯ ಪದಕ ಗಳಿಸಿದ್ದ ಅಮಿತ್ ಪಂಘಲ್, ಯುರೋಪಿಯನ್‌ ಚಾಂಪಿಯನ್‌ಷಿಪ್‌ನ ಬೆಳ್ಳಿ ಪದಕ ವಿಜೇತ ಇಂಗ್ಲೆಂಡ್‌ನ ಕಿಯಾರನ್ ಮ್ಯಾಕ್‌ಡೊನಾಲ್ಡ್ ಅವರನ್ನು 5–0 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಮತ್ತೊಂದೆಡೆ, 2019ರ ವಿಶ್ವ ಚಾಂಪಿಯನ್‌ಷಿಪ್‌ನ ಕಂಚಿನ ಪದಕ ವಿಜೇತೆ, ಇಂಗ್ಲೆಂಡ್‌ನ ಡೆಮಿ-ಜೇಡ್ ರೆಸ್ಟನ್ ಅವರನ್ನು 5–0 ಅಂತರದಿಂದ ಪರಾಭವಗೊಳಿಸುವ ಮೂಲಕ ನೀತೂ ಘಂಘಸ್ ಚಿನ್ನದ ಪದಕ ಗೆದ್ದಿದ್ದಾರೆ.

ಈ ಮಧ್ಯೆ, ಹಾಕಿ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ನ್ಯೂಜಿಲೆಂಡ್‌ ತಂಡವನ್ನು ಮಣಿಸುವ ಮೂಲಕ ಭಾರತದ ವನಿತೆಯರು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು