ಡಿ.18ರಂದು ಭಾರತ ಬಾಕ್ಸಿಂಗ್ ಫೆಡರೇಷನ್ ಚುನಾವಣೆ

ನವದೆಹಲಿ: ಭಾರತ ಬಾಕ್ಸಿಂಗ್ ಫೆಡರೇಷನ್ (ಬಿಎಫ್‌ಐ) ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಯು ಡಿಸೆಂಬರ್ 18ರಂದು ನಡೆಯಲಿದೆ. ಮೂರು ತಿಂಗಳ ಹಿಂದೆಯೇ ನಡೆಯಬೇಕಿದ್ದ ಚುನಾವಣೆಯು ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು.
‘ಗುರುಗ್ರಾಮದಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಮತದಾನದ ಕುರಿತು ಅಧಿಸೂಚನೆ ಹೊರಡಿಸಲಾಗಿದೆ‘ ಎಂದು ಬಿಎಫ್‌ಐ ಪ್ರಧಾನ ಕಾರ್ಯದರ್ಶಿ ಜಾಯ್ ಕೊವ್ಲಿ ಹೇಳಿದ್ದಾರೆ. ಡಿಸೆಂಬರ್ 2ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
‘ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು‘ ಎಂದು ಕೊವ್ಲಿ ತಿಳಿಸಿದ್ದಾರೆ.
ಸ್ಪೈಸ್‌ಜೆಟ್ ಕಂಪನಿಯ ಮಾಲೀಕ ಅಜಯ್ ಸಿಂಗ್ ಅವರು ಸದ್ಯ ಬಿಎಫ್‌ಐ ಅಧ್ಯಕ್ಷರಾಗಿದ್ದಾರೆ. 2016ರಲ್ಲಿ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆದು ಅಜಯ್ ಅಧಿಕಾರ ವಹಿಸಿಕೊಂಡಿದ್ದರು.
ಮುಂಬರುವ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯ ಮಹಾರಾಷ್ಟ್ರ ಮುಖಂಡ ಆಶಿಶ್ ಶೆಲಾರ್ ಸವಾಲು ಎದುರಾಗಬಹುದೆಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲ. 48 ವರ್ಷದ ಶೆಲಾರ್ ಮುಂಬೈ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.