ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇರಣಾ, ರಕ್ಷಾಗೆ ಕಂಚಿನ ಪದಕ

Last Updated 26 ಡಿಸೆಂಬರ್ 2019, 14:14 IST
ಅಕ್ಷರ ಗಾತ್ರ

ಶಿರಸಿ: ಬೆಂಗಳೂರಿನ ಇಂಡಸ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ನಡೆದ 65ನೇ ರಾಷ್ಟ್ರ ಮಟ್ಟದ ಶಾಲಾ ಕ್ರೀಡಾಕೂಟದ 14 ವರ್ಷದೊಳಗಿನ ವಿದ್ಯಾರ್ಥಿನಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಇಲ್ಲಿನ ಲಯನ್ಸ್ ಶಾಲೆಯ ವಿದ್ಯಾರ್ಥಿನಿ ಪ್ರೇರಣಾ ನಂದಕುಮಾರ್ ಶೇಟ್ ಹಾಗೂ ಸೇಂಟ್ ಅಂಥೋನಿ ಶಾಲೆಯ ವಿದ್ಯಾರ್ಥಿನಿ ರಕ್ಷಾ ದಿನೇಶ ಹೆಗಡೆ ತಂಡ ಕಂಚಿನ ಪದಕ ಪಡೆದಿದೆ.

ವೈಯಕ್ತಿಕ ವಿಭಾಗದಲ್ಲಿ ಪ್ರೇರಣಾ ಶೇಟ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾಳೆ. ಅನೇಕ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ, ಕೇಂದ್ರೀಯ ವಿದ್ಯಾ ಸಂಸ್ಥೆಗಳ 35ಕ್ಕೂ ಹೆಚ್ಚು ತಂಡಗಳ, 400ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ತರಬೇತಿ ನೀಡುತ್ತಿರುವ ಎನ್‌ಎಂಬಿಎ ಅಕಾಡೆಮಿ ಮುಖ್ಯಸ್ಥ ಮಂಜುನಾಥ ಪೇಟ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT