ಮಂಗಳವಾರ, ಮಾರ್ಚ್ 9, 2021
31 °C

ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ ಸ್ಥಾಪನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ಎನ್‌ಡಿಎ ಸರ್ಕಾರ, ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ‘ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ’ ಸ್ಥಾಪನೆಯನ್ನು ಪ್ರಕಟಿಸಿದೆ. ಆ ಮೂಲಕ ಮಹತ್ವಾಕಾಂಕ್ಷೆಯ ‘ಖೇಲೊ ಇಂಡಿಯಾ’ ಯೋಜನೆಯ ವ್ಯಾಪ್ತಿ ವಿಸ್ತರಿಸಲು ಮುಂದಾಗಿದೆ.

 ‘2017ರ ಅಕ್ಟೋಬರ್‌ನಲ್ಲಿ ಆರಂಭಿಸಿದ ‘ಖೇಲೊ ಇಂಡಿಯಾ’ ಯೋಜನೆ ವಿಸ್ತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕೆ ಅಗತ್ಯವಿರುವ ಎಲ್ಲ ಆರ್ಥಿಕ ನೆರವನ್ನು ಒದಗಿಸಲಾಗುವುದು. ಈ ಯೋಜನೆಯಡಿ ಎಲ್ಲ ಹಂತಗಳಲ್ಲಿ ಕ್ರೀಡೆಯನ್ನು ಜನಪ್ರಿಯಗೊಳಿಸಲು ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ’ಯನ್ನು ಸ್ಥಾಪಿಸಲಾಗುತ್ತಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಕ್ರೀಡಾ ಕ್ಷೇತ್ರಕ್ಕೆ ಮೀಸಲಿಟ್ಟ ಹಣದ ಪ್ರಮಾಣದಲ್ಲಿ ಬದಲಾವಣೆ ಮಾಡಿಲ್ಲ. ಪೀಯೂಷ್‌ ಗೋಯಲ್‌ ಈ ವರ್ಷದ ಫೆಬ್ರುವರಿಯಲ್ಲಿ ಮಂಡಿಸಿದ್ದ ಮಧ್ಯಂತರ ಬಜೆಟ್‌ನಲ್ಲಿ ಕ್ರೀಡೆಗೆ ₹ 2216.92 ಕೋಟಿ ಮೊತ್ತ ಮೀಸಲಿಡಲಾಗಿತ್ತು. ಇದು ಅದರ ಹಿಂದಿನ ವರ್ಷಕ್ಕೆ ಹೋಲಿಸಿದರೆ ₹ 214.2 ಕೋಟಿಯಷ್ಟು ಅಧಿಕ. 2017–18ರಲ್ಲಿ ₹ 2002.72 ಕೋಟಿ ನೀಡಲಾಗಿತ್ತು.

ಕ್ರೀಡಾಪಟುಗಳಿಗೆ ನೀಡಲಾಗುವ ಪ್ರೋತ್ಸಾಹಧನದ ನಿಧಿಯನ್ನು ₹ 63 ಕೋಟಿಯಿಂದ 89 ಕೋಟಿಗೆ ಹೆಚ್ಚಿಸಲಾಗಿದೆ. ಆದರೆ ದೇಶದ ಕ್ರೀಡಾ ಫೆಡರೇಷನ್‌ಗಳಿಗೆ ನೀಡಲಾಗುವ ನೆರವನ್ನು ಕೊಂಚಮಟ್ಟಿಗೆ, 245.13 ಕೋಟಿಯಿಂದ 245 ಕೋಟಿಗೆ ಇಳಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು