ಶನಿವಾರ, ಜೂನ್ 6, 2020
27 °C

ಬ್ಯಾಡ್ಮಿಂಟನ್‌ ಪುನರಾರಂಭ: ಖಚಿತವಾಗಿ ಹೇಳೋದು ಕಷ್ಟ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಹಾಂಗ್‌ಕಾಂಗ್‌: ‘ಕೊರೊನಾ ವೈರಾಣು ಹತ್ತಿಕ್ಕುವ ಉದ್ದೇಶದಿಂದ ಎಲ್ಲಾ ರಾಷ್ಟ್ರಗಳು ತಮ್ಮ ಗಡಿಗಳನ್ನು ಮುಚ್ಚಿವೆ. ಜೊತೆಗೆ ಅಂತರರಾಷ್ಟ್ರೀಯ ವಿಮಾನಯಾನದ ಮೇಲೆ ನಿರ್ಬಂಧ ಹೇರಿವೆ. ಹೀಗಾಗಿ ಬ್ಯಾಡ್ಮಿಂಟನ್‌ ಚಟುವಟಿಕೆಗಳು ಯಾವಾಗ ಪುನರಾರಂಭವಾಗುತ್ತವೆ ಎಂಬುದನ್ನು ಖಚಿತವಾಗಿ ಹೇಳುವುದು ಕಷ್ಟ’ ಎಂದು ವಿಶ್ವ ಬ್ಯಾಡ್ಮಿಂಟನ್‌ ಫೆಡರೇಷನ್‌ನ (ಬಿಡಬ್ಲ್ಯುಎಫ್‌) ಮಹಾ ಕಾರ್ಯದರ್ಶಿ ಥಾಮಸ್‌ ಲುಂಡ್‌ ತಿಳಿಸಿದ್ದಾರೆ.

‘ಸಾಧ್ಯವಾದಷ್ಟು ಬೇಗ ಬ್ಯಾಡ್ಮಿಂಟನ್‌ ಟೂರ್ನಿಗಳನ್ನು ಆಯೋಜಿಸಬೇಕೆಂಬ ಆಸೆ ನಮಗೂ ಇದೆ. ಕೊರೊನಾದಿಂದಾಗಿ ಈಗ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ರಾಷ್ಟ್ರಗಳು ಅಂತರರಾಷ್ಟ್ರೀಯ ವಿಮಾನಯಾನದ ಮೇಲೆ ನಿರ್ಬಂಧ ವಿಧಿಸಿವೆ. ಅದನ್ನು ಯಾವಾಗ ತೆರವು ಮಾಡುತ್ತವೆ ಎಂಬುದೂ ನಮಗೆ ಗೊತ್ತಿಲ್ಲ. ವಿಮಾನಯಾನಕ್ಕೆ ಅವಕಾಶ ನೀಡದಿದ್ದರೆ ಆಟಗಾರರು, ನೆರವು ಸಿಬ್ಬಂದಿ ಹಾಗೂ ಇತರ ಅಧಿಕಾರಿಗಳು ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಕಷ್ಟ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು