ಬುಧವಾರ, ನವೆಂಬರ್ 30, 2022
21 °C

ಬಿಡಬ್ಲ್ಯುಎಫ್‌ ರ‍್ಯಾಂಕಿಂಗ್‌: ಪ್ರಣಯ್‌ಗೆ ಬಡ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ಆಟಗಾರ ಎಚ್‌.ಎಸ್‌.ಪ್ರಣಯ್ ಅವರು ಬಿಡಬ್ಲ್ಯುಎಫ್‌ ಪುರುಷರ ವಿಭಾಗದ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 15ರೊಳಗಿನ ಸ್ಥಾನಕ್ಕೆ ಮರಳಿದ್ದಾರೆ. 

ಇತ್ತೀಚೆಗೆ ನಡೆದ ವಿಶ್ವ ಚಾಂಪಿಯನ್‌ಷಿಪ್‌ ಮತ್ತು ಜಪಾನ್‌ ಓಪನ್‌ ಸೂಪರ್‌ 750 ಟೂರ್ನಿಯಲ್ಲಿ ಪ್ರಣಯ್‌ ಕ್ವಾರ್ಟರ್‌ಫೈನಲ್ ತಲುಪಿದ್ದು, ಅವರ ರ‍್ಯಾಂಕಿಂಗ್‌ನಲ್ಲಿ ಬಡ್ತಿಗೆ ಕಾರಣವಾಗಿದೆ. ಸದ್ಯ ಅವರು ಒಂದು ಸ್ಥಾನ ಏರಿಕೆ ಕಂಡು 15ನೇ ಸ್ಥಾನದಲ್ಲಿದ್ದಾರೆ.

ಲಕ್ಷ್ಯ ಸೇನ್ ಅವರು ಹೆಚ್ಚಿನ ರ‍್ಯಾಂಕ್‌ನಲ್ಲಿರುವ ಭಾರತದ ಆಟಗಾರನಾಗಿದ್ದು, ಒಂಬತ್ತನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಕಿದಂಬಿ ಶ್ರೀಕಾಂತ್‌ 11ನೇ ಸ್ಥಾನಕ್ಕೇರಿದ್ದಾರೆ.

ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ಮಹಿಳೆಯರ ವಿಭಾಗದಲ್ಲಿ ಆರನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. ಸೈನಾ ನೆಹ್ವಾಲ್ ಒಂದು ಸ್ಥಾನ ಏರಿಕೆ ಕಂಡಿದ್ದು, 31ನೇ ಸ್ಥಾನದಲ್ಲಿದ್ದಾರೆ. ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ– ಚಿರಾಗ್‌ ಶೆಟ್ಟಿ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಎಂ.ಆರ್‌.ಅರ್ಜುನ್‌– ಧ್ರುವ ಕಪಿಲ 23ನೇ ಸ್ಥಾನದಲ್ಲಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ– ಸಿಕ್ಕಿ ರೆಡ್ಡಿ ಜೋಡಿಯೂ ಒಂದು ಸ್ಥಾನ ಬಡ್ತಿ ಪಡೆದು 23ನೇ ಸ್ಥಾನಕ್ಕೇರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು